ಬಂಟ್ವಾಳ: ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ ಬಂಟ್ವಾಳ ತಾಲೂಕು ಘಟಕ ಆಶ್ರಯದಲ್ಲಿ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಮಾ.12ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.
ಆಹ್ವಾನ ಪತ್ರಿಕೆಗೆ ಇಲ್ಲಿ ಕ್ಲಿಕ್ ಮಾಡಿರಿ: Gamaka Sammelana (1)
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇಡೀ ದಿನ ನಡೆಯುವ ಕಾರ್ಯಕ್ರಮಕ್ಕೆ ಗಮಕಾಸಕ್ತರು ಭಾಗವಹಿಸಲು ಕರೆ ನೀಡಿದರು.
ತಾಲೂಕು ಘಟಕಾಧ್ಯಕ್ಷ ಕೈಯೂರು ನಾರಾಯಣ ಭಟ್ ಮಾಹಿತಿ ನೀಡಿ ಡಾ. ವಾರಿಜಾ ನಿರ್ಬೈಲು ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನದ ಉದ್ಘಾಟನಾ ಸಮಾರಂಭ ಬೆಳಗ್ಗೆ 10ರಂದು ನಡೆಯಲಿದ್ದು ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷೆ ಗಂಗಮ್ಮ ಕೇಶವಮೂರ್ತಿ ಅಧ್ಯಕ್ಷತೆ ವಹಿಸುವರು ಎಂದರು. ಬಳಿಕ ವಿವಿಧ ಗೋಷ್ಠಿಗಳು, ಗಮಕ ವಾಚನ, ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಸಮಾರೋಪದಲ್ಲಿ ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಸಮಾರೋಪ ಭಾಷಣ ಮಾಡುವರು ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರಧಾನ ಸಂಚಾಲಕ ಕೃಷ್ಣ ಶರ್ಮ ಅನಾರು, ಸಂಚಾಲಕ ರಾಜಮಣಿ ರಾಮಕುಂಜ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಪ್ರಮುಖರಾದ ಕೋಕಳ ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…