ನಾಳೆ ಪರೀಕ್ಷೆ ಬರೆಯಬೇಕಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬಂಟ್ವಾಳ ತಾಲೂಕಿನ ಬಾಳ್ತಿಲ ಎಂಬಲ್ಲಿ ಬೆಳಗ್ಗೆ ನಡೆದಿದೆ. ಕಲ್ಲಡ್ಕದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವೈಷ್ಣವಿ (17) ಸಾವನ್ನಪ್ಪಿದ ಬಾಲಕಿ.
ಜಾಹೀರಾತು
ಶಿಕ್ಷಕ ದಂಪತಿಯ ಪುತ್ರಿಯಾದ ವೈಷ್ಣವಿ ಬೆಳಗ್ಗೆ ಸುಮಾರು 10ರ ಆಸುಪಾಸಿನಲ್ಲಿ ಈ ಕೃತ್ಯವೆಸಗಿದ್ದಾಗಿ ಸಂಶಯಿಸಲಾಗಿದೆ. ದಿಢೀರನೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ವೈಷ್ಣವಿ, ಪಿಯುಸಿಯಲ್ಲಿ ಕಾಮರ್ಸ್ ಕಲಿಯುತ್ತಿದ್ದು, ಆಕೆಯ ಪರೀಕ್ಷೆ ನಾಳೆ ನಿಗದಿಯಾಗಿತ್ತು. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನೇಣಿಗೆ ಶರಣಾದ ದ್ವಿತೀಯ ಪಿಯುಸಿ ಬಾಲಕಿ"