ಬಂಟ್ವಾಳ: ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.
ಒಟ್ಟು 3,11,550 ರೂ ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್ ಬಾಕ್ಸ್ ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಲೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ, ಅಂದಾಜು ತೂಕ 35 ಗ್ರಾಂ, 2 ಕೈಬಳೆಗಳು ಅಂದಾಜು ತೂಕ 20ಗ್ರಾಂ, ಇವುಗಳು ಕಳವಾಗಿವೆ. ಒಟ್ಟು ತೂಕ 93 ಗ್ರಾಂ ಆಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಕಳವು ಮಾಡಿದ್ದಾರೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಗೆ ಮನೆಯ ಮಾಲಕಿ ದೂರು ನೀಡಿದ್ದಾರೆ.
ಮನೆಯಲ್ಲಿರುವವರು ಕೆಲಸಕ್ಕೆಂದು ಬೆಳಗ್ಗೆ ಹೋಗಿದ್ದರು. ಈ ಸಂದರ್ಭ ಮನೆಗೆ ಬೀಗ ಹಾಕಿ, ಕೀಯನ್ನು ಬಚ್ಚಲು ಕೋಣೆಯಲ್ಲಿರಿಸಿ ಹೋಗುತ್ತಿದ್ದರು. ಅದೇ ರೀತಿ ಬೀಗದ ಕೈಯನ್ನು ಇಟ್ಟು ಹೋಗಿದ್ದರು. ಸಂಜೆ ಪತಿ, ಪತ್ನಿ ಕೆಲಸ ಮುಗಿಸಿ ಮನೆಗೆ ಬಂದು ನೋಡುವಾಗ ಬೀಗ ಹಾಕಿತ್ತು. ಆದರೆ ಬೀಗ ತೆಗೆದು ಒಳಗೆ ಹೋದಾಗ ಕಳವು ಕೃತ್ಯ ಬೆಳಕಿಗೆ ಬಂತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…