ಬಂಟ್ವಾಳ

ನನ್ನ ಅವಧಿಯಲ್ಲಾದ ಕಾರ್ಯಕ್ರಮಗಳ ಪ್ರತಿ ವಿವರವೂ ಇದೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ನನ್ನ ಅವಧಿಯಲ್ಲಾದ ಕಾರ್ಯಕ್ರಮಗಳ ಪ್ರತಿ ವಿವರವೂ ಇದೆ ಕಳೆದ ನಾಲ್ಕೂವರೆ ವರ್ಷಗಳಲ್ಲಿ 2 ಸಾವಿರ ಕೋಟಿ ರೂಗೂ ಮಿಕ್ಕಿ ಕೆಲಸ ಕಾರ್ಯಗಳನ್ನು ನಡೆಸಲಾಗಿದ್ದು, ಒಟ್ಟು 1504 ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಕ್ಷೇತ್ರದ ಪೇಜ್ ಪ್ರಮುಖರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ, ಮುಂದಿನ ಅವಧಿಯಲ್ಲೂ ಜನತೆಯ ಪ್ರತಿಯೊಂದು ಕೆಲಸಗಳನ್ನು ಮಾಡಲು ಶಕ್ತವಾಗಿ ನಿಲ್ಲುತ್ತದೆ ಎಂದ ಅವರು, ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾ ನಿಧಿ ಫಲಾನುಭವಿಗಳಾಗಿದ್ದಾರೆ.  ಬಿಜೆಪಿ ಸರಕಾರ ಈಗಾಗಲೇ ಜನರಿಗೆ ನೀಡಿದ ಯೋಜನೆಗಳನ್ನು ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬಂದರೆ ನೀಡುತ್ತೇವೆ ಎಂಬ ಟೊಳ್ಳು ಭರವಸೆಯ ಗ್ಯಾರಂಟಿ ಕಾರ್ಡ್ ನೀಡಿದ್ದಾರೆ ಎಂದರು.

ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಚುನಾವಣಾ  ಪ್ರಭಾರಿ ರವಿಶಂಕರ ಮಿಜಾರ್, ವಿಭಾಗ  ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಒಳಚರಂಡಿ ಹಾಗೂ ಕುಡಿಯುವ  ನೀರು ಸರಬರಾಜು ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ‌.ಭಟ್ ಉಪಸ್ಥಿತರಿದ್ದರು. ಮಂಡಲದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು.   ಮಂಡಲದ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts