ಬಂಟ್ವಾಳ: ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆ ಬಾಳ್ತಿಲದಲ್ಲಿ ನಡೆಯಿತು. ಈ ಸಂದರ್ಭ ಕಲಾನೃತ್ಯ ತರಬೇತಿ, ಭಜನೆ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ನೀಲಮ್ಮ ಅವರು ಉದ್ಘಾಟಿಸಿದರು.
ಜಾಹೀರಾತು
ತುಳಸಿ ಅವರು ಯೋಗ ತರಬೇತಿ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಮಹಿಳಾ ಸಾಧಕಿಯರಾದ ತುಳಸಿ, ನೀಲಮ್ಮ, ಹೊನ್ನಮ್ಮ ಅವರನ್ನು ಗೌರವಿಸಲಾಯಿತು. ನ್ಯಾಯವಾದಿ, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರೂ ಆಗಿರುವ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಸಂಸ್ಥಾಪಕಿ ಶೈಲಜಾ ರಾಜೇಶ್ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾರದಾ ಜಿ ಬಂಗೇರ ಇವರು ಮಹಿಳೆಯರಿಗೆ ಪಾರ್ದಾನ , ಕಬಿತೆ ಯನ್ನು ಹೇಳಿದರು, ಡಾ. ರಾಜೇಶ್ ಪೂಜಾರಿ,ಭಾಸ್ಕರ್ ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆಯನ್ನು ಶೌರ್ಯ ನಡೆಸಿಕೊಟ್ಟರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆ"
Be the first to comment on "ಬಾಳ್ತಿಲದ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆ"