ಬಂಟ್ವಾಳ: ಬ್ರಹ್ಮರಕೂಟ್ಲುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹದ ವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಕಾರ್ಯವೈಖರಿ ವಿರುದ್ಧ ಎಸ್.ಡಿ.ಪಿ.ಐ. ಕಿಡಿಕಾರಿದೆ. ಈ ಕುರಿತು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ, ಈ ಕುರಿತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದಿದ್ದಾರೆ.
ಜಾಹೀರಾತು
ತಾಲೂಕು ಕಚೇರಿಯಲ್ಲಿ ಬ್ರೋಕರುಗಳ ಹಾವಳಿ ಜಾಸ್ತಿಯಾಗಿದ್ದು, ಯಾವುದೇ ಸರಿಯಾದ ಕಡತಗಳು ಮುಂದೆ ಹೋಗಬೇಕಿದ್ದರೂ ಪ್ರಯಾಸಪಡುವ ಸ್ಥಿತಿ ಇದೆ ಎಂದರು.
ಈ ಬಾರಿ ಎಸ್.ಡಿ.ಪಿ.ಐ. ಚುನಾವಣಾ ಕಣದಲ್ಲಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಸ್ಪಷ್ಟಪಡಿಸಿದ ಅವರು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಮೊನೀಶ್ ಆಲಿ, ಶರೀಫ್ ವಳವೂರು, ಚುನಾವಣಾ ಪ್ರಭಾರಿ ಶಾಹುಲ್ ಹಮೀದ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಟೋಲ್ ಗೇಟ್, ಕಂದಾಯ ಇಲಾಖೆ ಕಾರ್ಯವೈಖರಿ ವಿರುದ್ಧ ಕಿಡಿಕಾರಿದ ಎಸ್.ಡಿ.ಪಿ.ಐ."