ಜಾಹೀರಾತು
ಬೋರ್ ವೆಲ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಕಾಶಿಮಠ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಉಕ್ಕುಡದ ಆಲಂಗಾರು ನಿವಾಸಿ ರಂಜಿತ್ (20) ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮತ್ತೋರ್ವ ಸವಾರ ನಿತಿನ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ಬಳಿಕ ಲಾರಿ ಬೈಕ್ ಸವಾರರನ್ನು ಕೆಲ ಮೀಟರ್ ಗಳ ಕಾಲ ಎಳೆದೊಯ್ದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ಛಿದ್ರವಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿಟ್ಲದ ಕಾಶಿಮಠ ಬಳಿ ಭೀಕರ ಅಪಘಾತ: ಬೋರ್ ವೆಲ್ ಲಾರಿಯಡಿ ಸಿಲುಕಿ ಬೈಕ್ ನಲ್ಲಿದ್ದ ಯುವಕ ಸಾವು"