ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಮೂರ್ಗಜೆ ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು. 2.75 ಕೋಟಿ ರೂ ವೆಚ್ಚದಲ್ಲಿ ಈ ಅಣೆಕಟ್ಟು ನಿರ್ಮಾಣಗೊಂಡಿದ್ದು, ಇದು ಒಂದು ಬದಿಯಿಂದ ಇನ್ನೊಂದು ಬದಿಗೆ ಸಂಪರ್ಕವನ್ನೂ ಹೊಂದಿದೆ. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ ಶೆಟ್ಟಿ, ವಿಟ್ಲಪಡ್ನೂರು ಗ್ರಾ.ಪಂ.ಅಧ್ಯಕ್ಷೆ ರೇಷ್ಮಾ ಶಂಕರಿ ಬಲಿಪಗುಳಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಉದ್ಯಮಿ ರಾಜಾರಾಮ್ ಭಟ್ ಬಲಿಪಗುಳಿ, ಮೇಘಶ್ಯಾಮ ಅಂಗ್ರಿ ಉಪಸ್ಥಿತರಿದ್ದರು. ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿ, ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…