ಬಂಟ್ವಾಳ

ಬಂಟ್ವಾಳದಲ್ಲಿ ಎ.ಐ.ಸಿ.ಸಿ.ಟಿಯು ಜಿಲ್ಲಾ ಸಮಾವೇಶ

ಬಂಟ್ವಾಳ: ಬಂಟ್ವಾಳದ ಲಯನ್ಸ್ ಸೇವಾ ಮಂದಿರದಲ್ಲಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ನಡೆಯಿತು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಪಿ.ಅಪ್ಪಣ್ಣ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುವ ಮೂಲಕ ನ್ಯಾಯ ದೊರಕಿಸಿಕೊಡುತ್ತಿದ್ದೇವೆ. ಕೊರೊನಾ ಸಂದರ್ಭ ನ್ಯಾಯಾಲಯದಲ್ಲಿ ಹಕ್ಕುಗಳಿಗೆ ಹೋರಾಟ ಮಾಡಿದ ಏಕೈಕ ಸಂಘಟನೆ ಇದು. ರಾಜ್ಯ ಸರಕಾರ ಅಕ್ಷರ ದಾಸೋಹ, ಆಶಾ,ಅಂಗನವಾಡಿ ಮುಂತಾದ ನೌಕರರನ್ನು ಇನ್ನೂ ನೌಕರರೆಂದು ಪರಿಗಣಿದೆ ಸಮಾಜ ಸೇವಕರು ಎಂದು ಬಿಂಬಿಸಿ ಸೌಲಭ್ಯದಿಂದ ವಂಚಿಸುತ್ತಿದೆ ಎಂದರು.

ಕೇಂದ್ರ, ರಾಜ್ಯವನ್ನಾಳುತ್ತಿರುವ ಬಿಜೆಪಿ ಸರಕಾರ ಕಾರ್ಮಿಕ ವಿರೋಧಿ ಕಾನೂನುಗಳನ್ನು ತಂದಿದ್ದು, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತೊಗೆಯಿರಿ ಎಂದರು.

ಸಮಾವೇಶದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದ ಸಿ.ಪಿ‌.ಐ.ಎಂ.ಎಲ್ (ಲಿಬರೇಶನ್ ) ರಾಜ್ಯ ಸಮಿತಿ ಸದಸ್ಯರಾದ ಪಿ.ಆರ್.ಎಸ್ ಮಣಿ ಮಾತನಾಡಿ ಸರಕಾರವು ಅಕ್ಷರ ದಾಸೋಹ ನೌಕರರನ್ನು ಅತ್ಯಂತ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುತ್ತಿದ್ದು ,ಅವರನ್ನು ನೌಕರರಾಗಿ ಪರಿಗಣಿಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು ಸಮಾವೇಶದಲ್ಲಿ ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ  ಮಾತನಾಡಿ ಸರಕಾರಗಳು ಕಾರ್ಮಿಕರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡದೆ ಕಾರ್ಮಿಕರನ್ನು ಸತಾಯಿಸುತ್ತಿದ್ದು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಯನ್ನು ಬಿಜೆಪಿ ಸರಕಾರವು ದುರುಪಯೋಗ ಮಾಡಿದೆ. ಅಕ್ಷರದಾಸೋಹ ನೌಕರರು ಅತ್ಯಂತ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ನಿವೃತ್ತಿ ಹೆಸರಿನಲ್ಲಿ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದರು.

ಮುಖ್ಯ ಅತಿಥಿಗಳಾಗಿ ಸಿ.ಪಿ.ಐ.ಎಂ.ಎಲ್ (ಲಿಬರೇಷನ್ ) ಜಿಲ್ಲಾ ಮುಖಂಡರಾದ ಭರತ್ ಕುಮಾರ್, ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ಜಯಶ್ರೀ .ಆರ್.ಕೆ‌ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಎ.ಐ.ಸಿ.ಸಿ.ಟಿ.ಯು ಮುಖಂಡರಾದ ಮೋಹನ್ .ಕೆ.ಇ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ರೈತ ಸಂಘದ ಗೌರವಾದ್ಯಕ್ಷರಾದ ಸುರೇಂದ್ರ ಕೋರ್ಯ, ಎ.ಐ‌.ಸಿ.ಸಿ.ಟಿ.ಯು ಜಿಲ್ಲಾ ಮುಖಂಡರಾದ ಸತೀಶ್ ಕುಮಾರ್, ಆದಿವಾಸಿ ಸಂರಕ್ಷಣಾ ಸಮಿತಿ ಕೊಡಗು ಜಿಲ್ಲಾ ಮುಖಂಡರಾದ ರವಿ , ಕಾರ್ಮಿಕ ಮುಖಂಡರಾದ ಆನಂದ ಶೆಟ್ಟಿಗಾರ್,ಸುರೇಂದ್ರ ಕೋಟ್ಯಾನ್ ,ಸರಸ್ವತಿ ಮಾಣಿ,ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ವಾಣಿಶ್ರೀ ಕನ್ಯಾನ ಮುಂತಾದವರು ಉಪಸ್ಥಿತರಿದ್ದರು ಸಮಾವೇಶದಲ್ಲಿ ನೂತನ ಜಿಲ್ಲಾ ಸಮಿತಿ ರಚಿಸಲಾಯಿತು ಅಧ್ಯಕ್ಷರಾಗಿ ರಾಮಣ್ಣ ವಿಟ್ಲ , ಪ್ರಧಾನ ಕಾರ್ಯದರ್ಶಿ ಯಾಗಿ ಮೋಹನ್.ಕೆ.ಇ. ಉಪಾದ್ಯಕ್ಷರುಗಳಾಗಿ ರಾಜಾ ಚೆಂಡ್ತಿಮಾರ್, ಇಬ್ರಾಹಿಂ ಮೈಂದಾಳ, ಸುರೇಂದ್ರ ಕೋಟ್ಯಾನ್,  ಕಾರ್ಯದರ್ಶಿ ಗಳಾಗಿ ಸತೀಶ್ ಕುಮಾರ್ ಮಂಗಳೂರು, ಭರತ್ ಕುಮಾರ್ ಮಂಗಳೂರು, ನಾಗೇಶ್ ಕೈರಂಗಳ , ಕೋಶಧಿಕಾರಿಯಾಗಿ ಸರಸ್ವತಿ ಮಾಣಿ ಹಾಗೂ 13 ಜನರ ಕಾರ್ಯಕಾರಿ ಸಮಿತಿ ರಚಿಸಲಾಯಿತು.ಸಿ.ಪಿ‌.ಐ.ಎಂ.ಎಲ್. ರಾಜ್ಯ ಸಮಿತಿ ಸದಸ್ಯರಾದ ಪಿ‌.ಆರ್.ಎಸ್ .ಮಣಿ ದ್ವಜಾರೋಹಣ ನೆರವೇರಿಸಿದರು. ಮೋಹನ್ ಕೆ.ಇ .ವಂದಿಸಿದರು

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ