ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಭವ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆನೀಡುವ ದ್ವಿಚಕ್ರ ವಾಹನ ಸೌಲಭ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು.
ಒಟ್ಟು 23 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ, ಉಳಿದ ಫಲಾನುಭವಿಗಳಿಗೆ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಬಂಟ್ವಾಳ ದಲ್ಲಿ ಅತೀ ಹೆಚ್ಚು 70 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದ್ದು ಈಗಾಗಲೇ 29 ಮಂದಿಗೆ ವಿತರಿಸಲಾಗಿದೆ. ಉಳಿದಿರುವ ಸೌಲಭ್ಯಗಳನ್ನು ಕ್ರಮಬದ್ದವಾಗಿ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಶ್ ನಾಯಕ್ ತಿಳಿಸಿದರು.
ಈ ಸಂದರ್ಭ ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಿಯಿ, ನರಿಕೊಂಬು ಗ್ರಾ.ಪಂ.ಅಧ್ಯಕ್ಷೆ ವನಿತಾ ಪುರುಷೋತ್ತಮ, ಎಸ್.ಟಿ.ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ್, ಪ್ರಧಾನ ಕಾರ್ಯದರ್ಶಿ ಯಶವಂತ ನಗ್ರಿ, ಎಸ್.ಸಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಚೆಂಡ್ತಿಮಾರ್, ಗ್ರಾ.ಪಂ.ಸದಸ್ಯರಾದ ಪ್ರಶಾಂತ್ ಪೂಜಾರಿ ವಿಟ್ಲುಕೋಡಿ, ಪ್ರಮುಖರಾದ ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಚರಣ್ ಜುಮಾದಿಗುಡ್ಡೆ, ಶಶಿರಾಜ್ ಶೆಟ್ಟಿ ಸರಪಾಡಿ,ರಮೇಶ್ ರಾವ್ ಮಂಚಿ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಪ.ಜಾತಿ, ಪಂಗಡ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಸೌಲಭ್ಯ ವಿತರಣೆ"