ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಶನಿವಾರ ವಗ್ಗದ ಕಾರಿಂಜ ಕ್ರಾಸ್ ಬಳಿ ಕರಾವಳಿ ಪ್ರಜಾಧ್ವನಿ ಯಾತ್ರೆ ಪ್ರವೇಶಿಸಿತು.
ಮಾಜಿ ಸಚಿವ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ಬಿ.ರಮಾನಾಥ ರೈ ಮಾತನಾಡಿ, ಸಾಮಾಜಿಕ ಸಾಮರಸ್ಯದತ್ತ ಕಾಂಗ್ರೆಸ್ ಕೆಲಸ ಮಾಡುತ್ತಿದ್ದು, ಈ ಬಾರಿ ಬಿಜೆಪಿ ಸೋಲು ನಿಶ್ಚಿತ. ಇದು ನನ್ನ ಕಡೆಯ ಚುನಾವಣೆಯಾಗಿದ್ದು, ಶಕ್ತಿಮೀರಿ ಕೆಲಸ ಮಾಡುತ್ತೇನೆ ಎಂದರು.
ಪ್ರಮುಖರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ನಡೆದುಕೊಂಡದ್ದು ಅಕ್ಷಮ್ಯ ಎಂದರು.ಈ ಸಂದರ್ಭ ಎಐಸಿಸಿ ಕಾರ್ಯದರ್ಶಿ ರೋಜಿ ಎಂ.ಜಾನ್ ಮಾತನಾಡಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರುವುದು ನಿಶ್ಚಿತ ಎಂದರು.
ವಿಧಾನಪರಿಷತ್ತು ಸದಸ್ಯ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಪ್ರಮುಖರಾದ ಬಿ.ಇಬ್ರಾಹಿಂ, ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ ಶೆಟ್ಟಿ, ಶಾಹುಲ್ ಹಮೀದ್, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ, ಸುರೇಶ್ ಪೂಜಾರಿ ಜೋರ, ಇಬ್ರಹಿಂ ನವಾಜ್, ಲವೀನಾ ವಿಲ್ಮಾ ಮೊರಾಸ್, ಜಿನರಾಜ ಆರಿಗ, ರಜನಿ, ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಚಂದ್ರಶೇಖರ ಪೂಜಾರಿ, ಸುದರ್ಶನ ಜೈನ್, ಉಮೇಶ್ ಕುಲಾಲ್, ಸಂಪತ್ ಶೆಟ್ಟಿ ಮತ್ತಿತರರು ಇದ್ದರು.
ವಿಧಾನಪರಿಷತ್ತು ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ ಕೊಯಿಲ, ರಾಜೀವ ಶೆಟ್ಟಿ ಎಡ್ತೂರು ಕಾರ್ಯಕ್ರಮ ನಿರ್ವಹಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…