ಬಂಟ್ವಾಳ

ಕೇಂದ್ರದ ನಡವಳಿಕೆಗಳು ಸಂವಿಧಾನ ವಿರೋಧಿ: ಬಂಟ್ವಾಳದಲ್ಲಿ ಸಮಾನ ಮನಸ್ಕ ಸಮನ್ವಯ ಸಮಿತಿ ಆರೋಪ

ಜಾಹೀರಾತು

ಬಂಟ್ವಾಳ: ರಾಹುಲ್‌ಗಾಂಧಿ ಅನರ್ಹತೆ ವಿಚಾರ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲ ನಡವಳಿಕೆಗಳು ಸಂವಿಧಾನ ವಿರೋಧಿಯಾಗಿದೆ ಎಂದು ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.

ಈ ಕುರಿತು ಬಂಟ್ವಾಳ ತಾಲೂಕು ತಹಸೀಲ್ದಾರರ ಮೂಲಕ‌ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿರುವ ಸಮಿತಿ, ಎಲ್ಲಾ ಹಂತದ ಸರ್ಕಾರಗಳು ಜವಾಬ್ದಾರಿಯುತ ನಡೆಯನ್ನು ಅನುಸರಿಸುವಂತೆ ಒತ್ತಾಯಿಸಿತು.

ಸಮಿತಿ ಅಧ್ಯಕ್ಷ ಮೋಹನ್‌‌ ಶೆಟ್ಟಿ ಪಂಜಿಕಲ್ಲು, ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಪ್ರಮುಖರಾದ ಅಬ್ಬಾಸ್ ಅಲಿ, ಪ್ರಕಾಶ ಶೆಟ್ಟಿ ಶ್ರೀಶೈಲ, ಪ್ರಭಾಕರ ದೈವಗುಡ್ಡೆ, ಮ್ಯಾಥ್ಯೂ, ಹರೀಶ, ಕೇಶವ ಪೂಜಾರಿ, ಕೇಶವ ಬಿ.,  ಎಂ.ಹೆಚ್.ಮುಸ್ತಾಫಾ, ಅಬ್ದುಲ್‌ ಶರೀಫ್ , ಎಂ.ಬಿ.ಭಾಸ್ಕರ್, ರಿಚರ್ಡ್ ಶಂಭೂರು, ಡೊಂಬಯ್ಯ ಕುಲಾಲ, ಬಶೀರ್ ಕಾರಾಜೆ, ಇಬ್ರಾಹಿಂ ಉಳಿ ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts