ರಾ. ಹೆ. 75 ರ ಬೆಂಗಳೂರು-ಮಂಗಳೂರಿನ ಮಧ್ಯೆ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತದಲ್ಲಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ನಪೂರ್ಣ(50) ಎಂಬ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, ಕಾರು ಚಲಾಯಿಸಿದ ಮಗ ಅಶ್ವಿನ್ ಹಾಗೂ ತಂದೆ ಭಾಸ್ಕರ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನೆಲ್ಯಾಡಿ ಸಮೀಪ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ"