‘
ಸಜಿಪಮುನ್ನೂರಿನ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ಗೆ ಮಾಣಿಕ್ಯದ ಬೊಲ್ಪು ಬಿರುದು ನೀಡಿ ಇತ್ತೀಚೆಗೆ ಟೀಮ್ ಮಾಣಿಕ್ಯದಂಗಣ ವತಿಯಿಂದ ಗೌರವಿಸಲಾಯಿತು. ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ) ವಿದ್ಯಾನಗರ ಸಜೀಪಮುನ್ನೂರು ಈ ಸಂಸ್ಥೆಯು ಕಳೆದ ಮೂವತ್ತು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅರಳುವ ಪ್ರತಿಭೆಗಳನ್ನು ಗುರುತಿಸಿ, ಪೋಷಿಸಿ ನಿರಂತರವಾಗಿ ಸಮಾಜ ಸೇವೆ ಮಾಡುತ್ತಿದೆ. 2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಈ ಸೇವೆಗೆ ಟೀಮ್ ಮಾಣಿಕ್ಯದಂಗಣದ ವತಿಯಿಂದ ಮಾಣಿಕ್ಯದ ಬೊಲ್ಪು ಬಿರುದನ್ನು ನೀಡಿ ಗೌರವಿಸಲಾಯಿತು. ಮಾಣಿಕ್ಯದಂಗಣದ ಸಂಸ್ಥಾಪಕರಾದ ಚಂದ್ರಶೇಖರ್ ಪೂಜಾರಿ ಹಾಗೂ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು ಹಾಗೂ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಶಾರದಾ ಫ್ರೆಂಡ್ಸ್ ಸರ್ಕಲ್ (ರಿ)ವಿದ್ಯಾನಗರ ಸಜೀಪಮುನ್ನೂರು ಇದರ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಭಾಗವಹಿಸಿದ್ದರು
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)