ಬಂಟ್ವಾಳ: ದಾಖಲೆಗಳಿಲ್ಲದೆ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಹಿತ ಲಕ್ಷಾಂತರ ರೂ ಮೌಲ್ಯದ ಅಕ್ಕಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಫರಂಗಿಪೇಟೆಯಲ್ಲಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಲಾರಿ ಚಾಲಕ ಬೆಂಗಳೂರು ನೆಲಮಂಗಲ ನಿವಾಸಿ ಸುನಿಲ್ ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
50 ಕೆ.ಜಿ.ತೂಕದ 300 ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಒಟ್ಟು ಆರು ಲಕ್ಷ ಮೌಲ್ಯದ 15000 ಕೆ.ಜಿ.ಅಕ್ಕಿಯನ್ನು ಹಾಗೂ ಸುಮಾರು 7 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ಮಾ.31 ರಂದು ಶುಕ್ರವಾರ ರಾತ್ರಿ 8 ಗಂಟೆ ವೇಳೆಗೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ನಡೆಸುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಫರಂಗಿಪೇಟೆಯಲ್ಲಿ ಲಾರಿಯನ್ನು ತಡೆದು ತಪಾಸಣೆ ನಡೆಸುತ್ತಿದ್ದಾಗ ಲಾರಿಯೊಳಗಿದ್ದ ಅಕ್ಕಿ ಲೋಡ್ ಗೆ ಯಾವುದೇ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಕಲಂ.98 ಕೆ.ಪಿ.ಆಕ್ಟ್ ನಂತೆ ಎನ್.ಸಿ.ನಂ.20/2023 ರಂತೆದೂರು ದಾಖಲಿಸಿ ಪ್ರಕರಣ ದಾಖಲಿಸಲಾಗಿದೆ.
Be the first to comment on "ದಾಖಲೆಗಳಿಲ್ಲದ ಆರು ಲಕ್ಷ ರೂ ಮೌಲ್ಯದ ಅಕ್ಕಿ ಸೀಝ್"