ಬಂಟ್ವಾಳ: ಬಂಟ್ವಾಳ ತಾಲೂಕಿನ ಲೋರೆಟ್ಟೋ ಮಾತಾ ಚರ್ಚ್ ನಲ್ಲಿ ಗರಿಗಳ ಭಾನುವಾರವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಇದರೊಂದಿಗೆ ಪವಿತ್ರ ವಾರಕ್ಕೆ ಅತ್ಯಂತ ಭಕ್ತಿ ಪೂರ್ವಕವಾಗಿ ಆರಂಭ ನೀಡಲಾಯಿತು. ಲೊರೆಟ್ಟೊ ಶಾಲಾ ವಠಾರದಲ್ಲಿ ಆರಂಭಗೊಂಡ ಪ್ರಾರ್ಥನಾ ವಿದಿಯ ಮೆರವಣಿಗೆಯಲ್ಲಿ ನೂರಾರು ಭಕ್ತಾದಿಗಳು, ಮಕ್ಕಳು ಭಕ್ತಿಯಿಂದ ಪಾಲ್ಗೊಂಡರು. ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತಾ ಪ್ರಾರ್ಥನಾ ವಿಧಿ ಹಾಗೂ ಪ್ರಧಾನ ಧರ್ಮಗುರುಗಳಾಗಿ ವಂ ಜೇಸನ್ ಮೊನಿಸ್ ಅವರು ಪವಿತ್ರ ಬಲಿ ಪೂಜೆಯನ್ನು ಭಕ್ತಾದಿಗಳೊಂದಿಗೆ ಅರ್ಪಿಸಿದರು. ಚರ್ಚ್ ಪಾಲನಾ ಮಂಡಳಿ ಮೇಲುಸ್ತುವಾರಿ ವಹಿಸಿತ್ತು. ತಪಸ್ಸುಕಾಲದಲ್ಲಿ ಸ್ಪಿರಿಚುವಲ್ ರಿನಿವಲ್ ಗೋಸ್ಕರ ಮೂರು ದಿನಗಳ ಧ್ಯಾನಕೂಟವನ್ನು ಸೋಮವಾರದಿಂದ ಬುಧವಾರವರೆಗೆ ಸಂಜೆ 4ರಿಂದ 8ರವರೆಗೆ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನಿಯ ರೋಮನ್ ಪಿಂಟೊ ನಡೆಸಿಕೊಡಲಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…