ಬಂಟ್ವಾಳ

ಮಹಿಳೆಯರನ್ನು ರಾಜಕೀಯವಾಗಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದೇ ಕಾಂಗ್ರೆಸ್: ಡಾ. ಪುಷ್ಪಾ ಅಮರನಾಥ್

ಬಂಟ್ವಾಳದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದಿಂದ ಮಾತೃಶಕ್ತಿ ಸಮಾವೇಶ ನಡೆಯಿತು. ಉದ್ಘಾಟಿಸಿದ ಕೆಪಿಸಿಸಿ ಮಹಿಳಾ ಘಟಕಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮಾತನಾಡಿ, ಮಹಿಳೆಯರು ಇಂದು ರಾಜಕೀಯವಾಗಿ ಗುರುತಿಸುವಂತಾದರೆ ಅದಕ್ಕೆ ಕಾಂಗ್ರೆಸ್ ಕಾರಣ ಎಂದರು. ವಿವರಗಳಿಗೆ ಮುಂದೆ ಓದಿರಿ

ಜಾಹೀರಾತು

ಬಂಟ್ವಾಳ: ಬಂಟ್ವಾಳದ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಭಾನುವಾರ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಮಾತೃಶಕ್ತಿ ಸಮಾವೇಶ ನಡೆಯಿತು.

ಜಾಹೀರಾತು

ನಿಶ್ಚಿತವಾಗಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಜಾರಿಗಳಿಸಲಿರುವ ಗ್ಯಾರಂಟಿ ಯೋಜನೆಗಳಿಂದ ನಮ್ಮ ದೈನಂದಿನ ಜೀವನದಲ್ಲಿ ಆರ್ಥಿಕವಾಗಿ ಗಟ್ಟಿಯಾಗಲು ಸಾಧ್ಯವಿದೆ. ಇಂದು ಮಹಿಳೆ ರಾಜಕೀಯವಾಗಿ ಬಲಶಾಲಿಯಾಗಲು ಕಾಂಗ್ರೆಸ್ ತಂದ ಮೀಸಲಾತಿ ನೀತಿ ಕಾರಣ. ಇದನ್ನು ಜಾರಿಗೊಳಿಸುವಾಗ ಬಿಜೆಪಿ ಅಂದು ಅಡ್ಡಿಪಡಿಸಿತ್ತು ಎಂದು ಈ ಸಂದರ್ಭ ದಿಕ್ಸೂಚಿ ಭಾಷಣ ಮಾಡಿದ ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಹೇಳಿದರು.

ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತರಲಿದ್ದು, ನಮ್ಮ ಒಂದೇ ಗ್ಯಾರಂಟಿಯಿಂದ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ರೂಪಾಯಿ ಲಾಭವಾಗಲಿದೆ ಎಂದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಇಂದಿನ ದಿನಗಳಲ್ಲಿ ಮಹಿಳೆ, ಯುವಕ, ರೈತ ಮತ್ತು ಕಾರ್ಮಿಕರ ವಿರೋಧಿಯಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ವರ್ತಿಸುತ್ತಿವೆ. ಯಾವ ಯೋಜನೆಗಳೂ ಜನಪರವಾಗಿಲ್ಲ. ರಮಾನಾಥ ರೈ ಅವರು ಜಾರಿಗೆ ತಂದ ಯೋಜನೆಗಳನ್ನು ಇಲ್ಲಿ ಬಿಜೆಪಿ ತನ್ನದೆಂದು ಹೇಳುತ್ತಿದ್ದು ಸ್ವಂತಿಕೆ ಇಲ್ಲ ಎಂದರು.

ಜಾಹೀರಾತು

ಕೆಪಿಎಂಸಿ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ.ಜಿಲ್ಲಾ ಚುನಾವಣಾ ವೀಕ್ಷಕರಾದ ಶೀಬಾ ರಾಮಚಂದ್ರನ್ ಮಾತನಾಡಿ, ಇಂದು ಮಹಿಳೆಯರ ಜೀವನ ದುಸ್ತರವಾಗಿದ್ದು, ಬಿಜೆಪಿ ಸರಕಾರ ಮಹಿಳಾ ವಿರೋಧಿಯಾಗಿದೆ. ಕಾಂಗ್ರೆಸ್ ಒಂದರಿಂದಷ್ಟೇ ಮಹಿಳೆಯರು ನೆಮ್ಮದಿಯಿಂದ ಇರಲು ಸಾಧ್ಯ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಮಾತನಾಡಿ, ಕಾಂಗ್ರೆಸ್ ಇಂದು ಗೆಲ್ಲುವ ಅನಿವಾರ್ಯತೆಯಿದ್ದು, ರಮಾನಾಥ ರೈ ಮತ್ತೊಮ್ಮೆ ಶಾಸಕರಾಗಿ ಸಚಿವರಾಗಬೇಕು ಎಂದರು.ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಚುನಾವಣೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಕುರಿತು ಮನವಿ ಮಾಡಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಹೆಣ್ಣುಮಕ್ಕಳಿಗಾಗಿ ಕಾಂಗ್ರೆಸ್ ಗರಿಷ್ಠ ಕಾರ್ಯಕ್ರಮ ಆಯೋಜಿಸಿದೆ. ಇಂದಿರಾ, ರಾಜೀವ್,  ನರಸಿಂಹರಾವ್ ಸರಕಾರ ಇದ್ದಾಗ ಆದ ಅಧಿಕಾರ ವಿಕೇಂದ್ರೀಕರಣ, ಮನಮೋಹನ ಸಿಂಗ್ ಸರಕಾರ ಇದ್ದಾಗ ಆದ ಕ್ರಾಂತಿಕಾರಿ ಬದಲಾವಣೆಗಳನ್ನು ನೆನಪು ಮಾಡಿಕೊಳ್ಳಬೇಕಾಗಿದೆ. ಈ ಬಾರಿ ಆಶ್ರಯ ಯೋಜನೆಯಲ್ಲಿ ಎಷ್ಟು ಮನೆ ಕೊಡಲಾಗಿದೆ ಎಂದು ಪ್ರಶ್ನಿಸಿದ ಅವರು, ನಾವು ಸುಳ್ಳು ಹೇಳುವವರಲ್ಲ, ನಮ್ಮ ಭರವಸೆಗಳು ಸುಳ್ಳಾಗುವುದೂ ಇಲ್ಲ ಎಂದರು.

ಜಾಹೀರಾತು

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಆಗಿರುವ ಮಂಗಳೂರು ಮಾಜಿ ಮೇಯರ್ ಅಪ್ಪಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಮಾಣಿ ಗ್ರಾಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಸ್ವಾಗತಿಸಿ, ವಂದಿಸಿದರು. ಇದಕ್ಕೂ ಮುನ್ನ ಬಿ.ಸಿ.ರೋಡಿನಿಂದ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ರಾಜ್ಯ ಮಹಿಳಾ ಕಾಂಗ್ರೆಸ್ ಸದಸ್ಯೆ ಐಡಾ ಸುರೇಶ್, ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಕೆ.ಪಿ.ಸಿ.ಸಿ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯ ಎಂ.ಎಸ್. ಮುಹಮ್ಮದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಗಾಣಿಗ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ ಜೈನ್, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಾಸು ಪೂಜಾರಿ, ಶಬ್ಬೀರ್ ಸಿದ್ಧಕಟ್ಟೆ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆಯರಾದ ಮಲ್ಲಿಕಾ ವಿ. ಶೆಟ್ಟಿ, ಧನಲಕ್ಷ್ಮಿ ಬಂಗೇರ, ತಾ.ಪಂ. ಮಾಜಿ ಸದಸ್ಯೆಯರಾದ ನಝೀಮಾ ಬೇಗಂ, ಶೋಭಾ ರೈ, ಪುರಸಭೆ ಉಪಾಧ್ಯಕ್ಷೆ ಜೆಸಿಂತಾ, ಪುರಸಭೆ ಸದಸ್ಯರಾದ ಜನಾರ್ಧನ್ ಚೆಂಡ್ತಿಮಾರ್, ಲೋಲಾಕ್ಷಿ ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷ ಹರ್ಷದ್ ಸೆರಾವು, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಬ್ರಾಹೀಂ ನವಾಝ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ, ಹಿಂದುಳಿದ ವರ್ಗಗಳ ಬ್ಲಾಕ್ ಅಧ್ಯಕ್ಷ ರಮೇಶ್ ಪಣೋಲಿಬೈಲು, ಪ್ರಚಾರ ಸಮಿತಿ ಸಂಯೋಜಕ ಉಮೇಶ್ ಸಪಲ್ಯ, ಪ್ರಮುಖರಾದ ಕಾಂಚಲಾಕ್ಷಿ, ಫ್ಲೋಸಿ ಡಿಸೋಜಾ, ಜೊಸ್ಪಿನ್ ಡಿಸೋಜ, ರೇಶ್ಮಾ, ಫೌಝಿಯಾ, ಡೆಂಝಿಲ್ ನೊರೊನ್ಹ ಮುಂತಾದವರು ಉಪಸ್ಥಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ