ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಚಿಣ್ಣರ ಚಿಲಿಪಿಲಿ ಮಕ್ಕಳ ಬೇಸಗೆ ಶಿಬಿರ ಆರಂಭಗೊಂಡಿತು.
ಜಾಹೀರಾತು
ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೇಸಿ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಕೆಲಸ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ಗೌರವ ಪ್ರಧಾನ ಕಾರ್ಯದರ್ಶಿ ವಿ.ಸು.ಭಟ್ ಶುಭ ಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಜೇಸಿ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಕಾರ್ಯಕ್ರಮ ಆಯೋಜನೆಯ ಉದ್ದೇಶ ವಿವರಿಸಿ, ಮೊಬೈಲ್ ನೋಡುತ್ತಲೇ ಕುಳಿತುಕೊಳ್ಳುವ ಮಕ್ಕಳು ಇಂಥ ಕಾರ್ಯಕ್ರಮಗಳಿಂದ ಹೊರಜಗತ್ತಿನ ಸಂಪರ್ಕ ಪಡೆಯಲು ಸುಲಭವಾಗುತ್ತದೆ ಎಂದರು.
ಕಾರ್ಯಕ್ರಮ ಸಂಯೋಜಕಿ ದಿಶಾ, ಜೇಸಿ ಕಾರ್ಯದರ್ಶಿ ರಮ್ಯಾ ವಿನಾಯಕ ಉಪಸ್ಥಿತರಿದ್ದರು. ಪೂರ್ವಾಧ್ಯಕ್ಷ ಬಿ. ರಾಮಚಂದ್ರ ರಾವ್ ಸ್ವಾಗತಿಸಿದರು.ಮಹೇಶ್ ಕುಲಾಲ್ ಅವರು ನೃತ್ಯ ತರಬೇತಿ ನಡೆಸಿಕೊಟ್ಟರು. ಐದು ದಿನಗಳ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕ್ರಾಫ್ಟ್, ಕ್ಲೇ ಆರ್ಟ್ ಮತ್ತಿತರ ತರಬೇತಿ ನೀಡಲಾಗುತ್ತದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಚಿಣ್ಣರ ಚಿಲಿಪಿಲಿ ಶುರು"
Be the first to comment on "ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಚಿಣ್ಣರ ಚಿಲಿಪಿಲಿ ಶುರು"