ಬಂಟ್ವಾಳ

ಮಕ್ಕಳಿಗೆ ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ: ಮಹಿಳೆಯಿಂದ ದೂರು

ಕೆಲಸ ಕೊಡಿಸುವುದಾಗಿ ಹೇಳಿ ಸುಮಾರು 6 ಲಕ್ಷ ರೂ ವಂಚನೆ ನಡೆಸಿದ ಪ್ರಕರಣವೊಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಕಳ್ಳಿಗೆ ಗ್ರಾಮದ ಮಹಿಳೆಯೊಬ್ಬರು ಈ ಕುರಿತು ದೂರು ನೀಡಿದ್ದಾರೆ. ಮಂಗಳೂರಿನ ಸುಧೀರ್ ರಾವ್ ಎಂಬ ವ್ಯಕ್ತಿ ಮೋಸ ಮಾಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು

 

ಜಾಹೀರಾತು

ದೂರು ನೀಡಿದ ಮಹಿಳೆಯ ಮಕ್ಕಳಿಗೆ ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ  ಬಿ.ಸಿ.ರೋಡ್ ನಲ್ಲಿ 2,83,800ರೂ  ನಗದು ಮತ್ತು ಗೂಗಲ್ ಪೇ ಮೂಲಕ ವಿವಿಧ ದಿನಗಳಲ್ಲಿ ಹಣವನ್ನು ತನ್ನ ಅಕೌಂಟಿಗೆ ಹಾಕಿಸಿಕೊಂಡಿದ್ದಾನೆ. ಬಳಿಕ ದೂರು ನೀಡಿದ ಮಹಿಳೆಯ ಮಕ್ಕಳನ್ನು ಮುಂಬಯಿಗೆ ಬರಲು ಹೇಳಿ ಅಲ್ಲಿ ಮಕ್ಕಳಿಂದ ರೂ.15,600 ಹಣವನ್ನು ಪಡೆದು ಬಲ್ಗೆರಿಯಾದಲ್ಲಿ ಚಳಿಯಿರುವುದರಿಂದ ಜಾಕೆಟ್ ತೆಗೆದುಕೊಂಡು ಬರುತ್ತೇನೆಂದು ಹೇಳಿ ಹೋದವನು ವಾಪಾಸು ಬರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುತ್ತಾನೆ. ಸುಧೀರ್ ರಾವ್ ಎಂಬಾತನು ಒಟ್ಟು ರೂ.6,30,000  ಹಣವನ್ನು ಕೆಲಸ ಕೊಡಿಸುವುದಾಗಿ ಪಡೆದುಕೊಂಡು ಮೋಸ ಮಾಡಿರುವುದಾಗಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ