ಐಜಿ ಚಂದ್ರ ಗುಪ್ತ ವಿಟ್ಲಕ್ಕೆ ಭೇಟಿ: ಚುನಾವಣೆ ಹಿನ್ನೆಲೆ ಭದ್ರತೆಗಳ ಪರಿಶೀಲನೆ

ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು.

ಜಾಹೀರಾತು

ಚುನಾವಣಾ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ಭೇಟಿ ನೀಡಿ ಸಾರ್ವಜನಿಕರ ಸಭೆಯನ್ನು ನಡೆಸಿ, ವಿವಿಧ ಗಡಿ ಭಾಗದ ತಪಾಸಣಾ ಕೇಂದ್ರಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಠಾಣೆ ಅಥವಾ ಹೊರ ಠಾಣೆಯನ್ನು ಸ್ಥಾಪನೆ ಮಾಡಿದ ಮೇಲೆ ಸಾರ್ವಜನಿಕರ ಅನುಕೂಲಕ್ಕೆ ನಿತ್ಯ ತೆರೆಯಲಾಗುತ್ತದೆ. ನೆಲ್ಲಿಕಟ್ಟೆ ಹಾಗೂ ಆನೆಕಲ್ಲು ಭಾಗದಲ್ಲಿ ಚೆಕ್ ಪೋಸ್ಟ್ ಇದ್ದು, ಸಿಬ್ಬಂದಿಗಳು ಮಾತ್ರ ಕನ್ಯಾನದಲ್ಲಿ ತಪಾಸಣೆ ಮಾಡುವ ಕಾರ್ಯ ಮಾಡಬಾರದು. ಕನ್ಯಾನ ಹೊರ ಠಾಣೆಯ ಸ್ಥಾಪನೆಯ ಉದ್ದೇಶ ಹಾಗೂ ತಪಸಣಾ ಕೇಂದ್ರದ ಪ್ರತ್ಯೇಕ ಸ್ಥಳದಲ್ಲಿ ಸ್ಥಾಪನೆಯಾಗಿರುವ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಠಾಣೆಯ ಸಿಬ್ಬಂದಿಗಳು ಠಾಣೆಯಲ್ಲಿ ಇರುವುದಕ್ಕಿಂತ ಹೆಚ್ಚಾಗಿ ಒಳ ರಸ್ತೆಗಳ ಮೂಲಕ ಸಂಚರಿಸುವ ವ್ಯವಸ್ಥೆಯ ಬಗ್ಗೆ ನಿಘಾ ಇಡಲು ಸೂಚನೆಗಳನ್ನು ನೀಡಲಾಗಿದೆ. ಈ ತಪಾಸಣಾ ಕಾರ್ಯ ಆರಂಭವಾಗಿದ್ದು, ಮುಂದಿನ ದಿನದಲ್ಲಿ ಇನ್ನಷ್ಟು ಬಿಗಿಯಾಲಿದೆ. ಠಾಣೆಯನ್ನು ಮೇಲ್ದರ್ಜೆಗೇರಿಸುವುದರಿಂದ ಜನರಿಗೆ ಸೇವೆಗಳು ತಕ್ಷಣಕ್ಕೆ ಸಿಗಲಿ ಎಂಬ ಕಾರಣಕ್ಕಾಗಿದೆ. ಸಿಬ್ಬಂದಿ ಹೆಚ್ಚಳವಾಗಿ, ಸಿಬ್ಬಂದಿಗಳ ಕಾರ್ಯ ವ್ಯಾಪ್ತಿ ಸುಧಾರಿಸಿ ಎರಡು ಮೂರು ವರ್ಷದಲ್ಲಿ ಸುದಾರಿಸುತ್ತದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ, ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಐಜಿ ಚಂದ್ರ ಗುಪ್ತ ವಿಟ್ಲಕ್ಕೆ ಭೇಟಿ: ಚುನಾವಣೆ ಹಿನ್ನೆಲೆ ಭದ್ರತೆಗಳ ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*