ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಎಪ್ರಿಲ್ ತಿಂಗಳ ೬ರಂದು ಶ್ರೀ ಹನುಮೋತ್ಸವಶ್ರೀಮದ್ರಾಮಾಯಣ ಮಹಾಯಜ್ಞ ಶ್ರೀ ಗುರುದೇವಾನಂದ ಸ್ವಾಮಿಗಳವರ ಉಪಸ್ಥಿತಿಯಲ್ಲಿ ಜರಗಲಿದೆ.

ಪ್ರಯುಕ್ತ ಶ್ರೀ ರಾಮನವಮಿಯ ಸೂರ್ಯೋದಯದಿಂದ ಆರಂಭಗೊಂಡ ಅಖಂಡ (ನಿರಂತರ 168ಗಂಟೆಗಳ) ಭಗವನ್ನಾಮ ಸಂಕೀರ್ತನೆ ಮಂಗಲ ಪ್ರಾತಃಕಾಲ ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಪಂಚಾಮೃತಾಭಿಷೇಕ, ನಾಗತಂಬಿಲ ಬಳಿಕ ಶ್ರೀಮದ್ರಾಮಾಯಣ ಮಹಾಯಜ್ಞ ಆರಂಭಗೊಳ್ಳಲಿದೆ. 11 ಗಂಟೆಗೆ ಶ್ರೀಗಳು ಅನುಗ್ರಹ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಯಜ್ಞದ ಪೂರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಪುತ್ತೂರು ಇವರಿಂದ ಶ್ರೀ ಭಾಸ್ಕರ ಬಾರ್ಯ ಅವರ ನೇತೃತ್ವದಲ್ಲಿಹನುಮ ವಿಜಯಯಕ್ಷಗಾನ ತಾಳಮದ್ದಳೆ. ಸಂಜೆ ಸಾಮೂಹಿಕ ಶ್ರೀ ಹನುಮದ್ವೃತ ಪೂಜೆ, ರಾತ್ರಿ ರಂಗಪೂಜೆ, ವಿಶೇಷ ಬೆಳ್ಳಿರಥೋತ್ಸವ ಮತ್ತು ಉಯ್ಯಾಲೆ ಸೇವೆ ಜರಗಲಿರುವುದು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*