ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಎಪ್ರಿಲ್ ತಿಂಗಳ ೬ರಂದು ಶ್ರೀ ಹನುಮೋತ್ಸವ–ಶ್ರೀಮದ್ರಾಮಾಯಣ ಮಹಾಯಜ್ಞ ಶ್ರೀ ಗುರುದೇವಾನಂದ ಸ್ವಾಮಿಗಳವರ ಉಪಸ್ಥಿತಿಯಲ್ಲಿ ಜರಗಲಿದೆ.
ಈ ಪ್ರಯುಕ್ತ ಶ್ರೀ ರಾಮನವಮಿಯ ಸೂರ್ಯೋದಯದಿಂದ ಆರಂಭಗೊಂಡ ಅಖಂಡ (ನಿರಂತರ 168ಗಂಟೆಗಳ) ಭಗವನ್ನಾಮ ಸಂಕೀರ್ತನೆ ಮಂಗಲ ಪ್ರಾತಃಕಾಲ ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ಪಂಚಾಮೃತಾಭಿಷೇಕ, ನಾಗತಂಬಿಲ ಬಳಿಕ ಶ್ರೀಮದ್ರಾಮಾಯಣ ಮಹಾಯಜ್ಞ ಆರಂಭಗೊಳ್ಳಲಿದೆ. 11 ಗಂಟೆಗೆ ಶ್ರೀಗಳು ಅನುಗ್ರಹ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಯಜ್ಞದ ಪೂರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಪುತ್ತೂರು ಇವರಿಂದ ಶ್ರೀ ಭಾಸ್ಕರ ಬಾರ್ಯ ಅವರ ನೇತೃತ್ವದಲ್ಲಿ ’ಹನುಮ ವಿಜಯ’ ಯಕ್ಷಗಾನ ತಾಳಮದ್ದಳೆ. ಸಂಜೆ ಸಾಮೂಹಿಕ ಶ್ರೀ ಹನುಮದ್ವೃತ ಪೂಜೆ, ರಾತ್ರಿ ರಂಗಪೂಜೆ, ವಿಶೇಷ ಬೆಳ್ಳಿರಥೋತ್ಸವ ಮತ್ತು ಉಯ್ಯಾಲೆ ಸೇವೆ ಜರಗಲಿರುವುದು.