ಬಂಟ್ವಾಳ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಾರಿಗೆ ಚಂದ್ರ ಪೂಜಾರಿ ಅವರ ಮನೆಯಲ್ಲಿ ಉಳಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು.
ಮುಂದೆಯೂ ಪಕ್ಷವನ್ನು ಬಲಿಷ್ಠವಾಗೊಳಿಸಿ ಪಕ್ಷ ನಿರಂತರವಾಗಿ ಅಧಿಕಾರಕ್ಕೆ ಬರುವಂತೆ ಮಾಡಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಯು.ರಾಜೇಶ್ ನಾಯ್ಕ್ ಈ ಸಂದರ್ಭ ಹೇಳಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಜನಪರವಾದ ಯೋಜನೆಗಳು ಪ್ರತಿ ಮನೆಗೂ ತಲುಪಿದ್ದು,ಅದರ ಪನರಪಿ ನೆನಪಿಸುವ ಕೆಲಸ ಕಾರ್ಯಕರ್ತರಿಂದ ಮಾಡಬೇಕಾಗಿದೆ ಎಂದರು. ಈ ಸಂದರ್ಭ ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಉಳಿಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಮೈರ, ಬಂಟ್ವಾಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಉಳಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಉಳಿ ಶಕ್ತಿ ಕೇಂದ್ರದ ಪ್ರಮುಖ್ ವಸಂತ ಸಾಲಿಯಾನ್, ಬೂತ್ ಅಧ್ಯಕ್ಷ ಚಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…