ಬಂಟ್ವಾಳ: ಜೋಡುಮಾರ್ಗ ಜೇಸಿ ವತಿಯಿಂದ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಐದು ದಿನಗಳ ಕಾಲ ನಡೆದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದ ಸಮಾರೋಪ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಘಟಕದ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಐದು ದಿನಗಳ ಕಾಲ ವಿವಿಧ ತರಬೇತಿಗಳನ್ನು ಮಕ್ಕಳು ಪಡೆದರು. ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಭದ್ರಾ ಹೋಂ ಅಪ್ಲೈಯನ್ಸಸ್ ಮಾಲಕಿ ಮೇಘಾ ಮಂಜುನಾಥ ಆಚಾರ್ಯ ಭಾಗವಹಿಸಿ, ಮಕ್ಕಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭ ತರಬೇತುದಾರರಾದ ಸ್ಪೂರ್ತಿ ಜೈನ್, ಜೇಸಿ ನಿಕಟಪೂರ್ವ ಅಧ್ಯಕ್ಷ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಅಧ್ಯಕ್ಷೆ ರಶ್ಮಿತಾ ಉಪಸ್ಥಿತರಿದ್ದರು. ಜೋಡುಮಾರ್ಗ ಜೇಸಿ ಕಾರ್ಯದರ್ಶಿ ರಮ್ಯಾ ವಿನಾಯಕ ವಂದಿಸಿದರು. ಪೂರ್ವಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿದರು. ಪೂರ್ವಾಧ್ಯಕ್ಷ ಬಿ.ರಾಮಚಂದ್ರ ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…