ಬಂಟ್ವಾಳ

ಕಾಂಗ್ರೆಸ್ ಐಕ್ಯತಾ ಸಮಾವೇಶ: ಎಲ್. ಹನುಮಂತಯ್ಯ ಬಂಟ್ವಾಳಕ್ಕೆ

ಜಾಹೀರಾತು

ಬಂಟ್ವಾಳ :  ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗಗಳ ನೇತೃತ್ವದಲ್ಲಿ ಐಕ್ಯತಾ ಸಮಾವೇಶ ಭಾನುವಾರ (09-04-2023) ಬಿ.ಸಿ. ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಅವರು ಈ ಸಮಾವೇಶವನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಲು ಆಗಮಿಸಲಿದ್ದಾರೆ.

ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್. ಧರ್ಮಸೇನ, ರಾಜ್ಯ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಪಾಲಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶೇಖರ್ ಕುಕ್ಕೇಡಿ, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ನಾರಾಯಣ ನಾಯ್ಕ್, ಕೆ.ಪಿ.ಸಿ.ಸಿ. ಸದಸ್ಯ ಡಾ. ರಘು, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಜಿ ಅಧ್ಯಕ್ಷ ಪದ್ಮನಾಭ ನರಿಂಗಾನ, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ ಚೆಂಡ್ತಿಮಾರ್, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಕು. ಅಪ್ಪಿ, ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಂಚಾಲಕರು ಸರೋಜಿನಿ, ಕಡಬ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷೆ ಲಕ್ಷ್ಮಿ, ಮೂಡುಬಿದಿರೆ ಪುರಸಭೆ ಸದಸ್ಯ ಕೊರಗಪ್ಪ ಮುಂತಾದವರು ಮುಖ್ಯ ಅತಿಥಿಗಳಾಗಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಬಿ. ರಮಾನಾಥ ರೈಗಳ ಸಾರಥ್ಯ ಮತ್ತೊಮ್ಮೆ ಸಿಗುವುದನ್ನು ದೃಢಪಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಒಗ್ಗಟ್ಟನ್ನು ಪ್ರದರ್ಶಿಸುವುದಕ್ಕಾಗಿ ಈ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮೊದಲು ಬಿ.ಸಿ. ರೋಡ್ ರಕ್ತೇಶ್ವರಿ ದೇವಸ್ಥಾನದ ಬಳಿಯಿಂದ ಸ್ಪರ್ಷ ಕಲಾ ಮಂದಿರದ ವರೆಗೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಘಟಕರಾದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಅಣ್ಣು ಖಂಡಿಗ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚಂದ್ರಹಾಸ ನಾಯ್ಕ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಪ್ರೀತಮ್ ರಾಜ್ ದ್ರಾವಿಡ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಚನ್ನಪ್ಪ ನಾಯ್ಕ್ ಮುಂತಾದವರ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts