ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಕಾರು ಅಪಘಾತ: ಸ್ಥಳೀಯ ನಿವಾಸಿ ಮೃತ್ಯುವಶ

ಜಾಹೀರಾತು

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಬಿ.ಸಿ.ರೋಡ್ ನ ಹೃದಯಭಾಗದಲ್ಲಿ ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಉಳಿದವರು ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಬಿ.ಸಿ.ರೋಡಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಸಾವನ್ನಪ್ಪಿದವರು.

ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಪುತ್ತೂರಿನಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ಮರಳುತ್ತಿರುವ ವೇಳೆ ಈ ಅಪಘಾತ ಸಂಭವಿಸಿದೆ. ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪ ಈ  ಅವಘಡ ಸಂಭವಿಸಿದೆ.

 ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು.

ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ತಲುಪುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು  ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.  ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಐ.ಮೂರ್ತಿ ಅವರು ಬೇಟಿ ನೀಡಿದರು. ಮೃತ ಸದಾಶಿವ ಆಚಾರ್ಯ ಅವರು ಪತ್ನಿ, 4 ಗಂಡು ಹಾಗೂ 5 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts