ನಾಪತ್ತೆಯಾದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ

ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ.

ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13)  ಮೃತ ಬಾಲಕ.

ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ.

ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು.

ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ ಧರಿಸಿದ್ದ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ತಡರಾತ್ರಿ ವೇಳೆ ಪತ್ತೆಯಾಗಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಾಪತ್ತೆಯಾದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*