ಏಪ್ರಿಲ್ 15ರಂದು ಪೊಳಲಿಯಿಂದ ಪಾದಯಾತ್ರೆ ಮೂಲಕ ಬಂಟ್ವಾಳ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಜಾಹೀರಾತು
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪಕ್ಷ ನನ್ನನ್ನು ಮೂರನೇ ಬಾರಿ ಕಣಕ್ಕಿಳಿಸಿದ್ದು, 2013ರಲ್ಲಿ ಸೋತರೂ 2018ರಲ್ಲಿ ವಿಜಯಿಯಾಗಿದ್ದೇನೆ. ಇದೀಗ ಮತ್ತೆ ಚುನಾವಣೆಗೆ ಕಣಕ್ಕಿಳಿಸಿದ್ದು, ಕಾರ್ಯಕರ್ತರ ಆಶೀರ್ವಾದ ಮತ್ತು ಸಹಕಾರ ಇದಕ್ಕೆ ಕಾರಣ ಎಂದರು.
ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ಗೆಲ್ಲುತ್ತೇವೆ ಎಂದು ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹೇಳಿದರು. ಬೆಳಗ್ಗೆ 8 ಗಂಟೆಗೆ ಅಭಿಮಾನಿಗಳು ಪೊಳಲಿಯಿಂದ 15 ರಂದು ಹೆಜ್ಜೆ ಹಾಕಲಿದ್ದು, ಮಧ್ಯಾಹ್ನ 12.15ರ ವೇಳೆ ನಾಮ ಪತ್ರ ಸಲ್ಲಿಸಲಿದ್ದಾರೆ. ಪಕ್ಷ ಕಾರ್ಯಕರ್ತರ ಸಭೆಗಳಲ್ಲಿ ಈಗಾಗಲೇ ಉತ್ತಮ ಬೆಂಬಲ ವ್ಯಕ್ತಗೊಂಡಿದೆ ಎಂದರು. ಕ್ಷೇತ್ರ ಪ್ರಭಾರಿ ರವಿಶಂಕರ ಮಿಜಾರ್, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿ ಡೊಂಬಯ ಅರಳ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪೊಳಲಿಯಿಂದ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ"
Be the first to comment on "ಪೊಳಲಿಯಿಂದ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ನಾಮಪತ್ರ ಸಲ್ಲಿಕೆ"