ಬಂಟ್ವಾಳ

ಜಕ್ರಿಬೆಟ್ಟುವಿನಲ್ಲಿ ಅಪಘಾತಕ್ಕೆ ಬಿದ್ದಿಲ್ಲ ಬ್ರೇಕ್: ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ, ಬೈಕ್ ಸವಾರ ಸಾವು

ಜಾಹೀರಾತು

ಬಂಟ್ವಾಳ: ಅಪಾಯಕಾರಿ ಮಾರ್ಗ ಎಚ್ಚರ ಎಂಬ ಸೂಚನೆ, ರಸ್ತೆಯಲ್ಲಿ ವೇಗ ತಡೆಗೆ ವ್ಯವಸ್ಥೆ ಕಲ್ಪಿಸಿದರೂ ಬಂಟ್ವಾಳದ ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಎಂಬಲ್ಲಿ ಅಪಘಾತಗಳು ನಿಂತಿಲ್ಲ. ನಿನ್ನೆ ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ  ಯಾನೆ ಶ್ರೇಯಸ್ (30) ಸಾವನ್ನಪ್ಪಿದವರು.

ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದವರಾದ ಇವರು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.  ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು,ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತು ಆದರೂ ದಾರಿ ಮಧ್ಯೆ  ಕೊನೆಯುಸಿರೆಳೆದಿದ್ದಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts