ಸುಳ್ಯದಿಂದ ಮಡಿಕೇರಿಗೆ ತೆರಳುವ ರಸ್ತೆಯಾದ ಸಂಪಾಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.
ಮಂಡ್ಯ ಕಡೆಯ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕೊಡಗು ಜಿಲ್ಲೆಯ ಗಡಿಭಾಗವಾದ ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಪುರುಷ ಮತ್ತು ಒಂದು ಮಗು ಗಂಭೀರ ಗಾಯಗೊಂಡಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದವರೂ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಾಗಿದೆ. ಮೃತದೇಹಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರ ಹಾಗೂ ಗಾಯಾಳುಗಳ ವಿಳಾಸ ಇನ್ನಷ್ಟೇ ತಿಳಿದುಬರಬೇಕಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಉಪಠಾಣೆಯಲ್ಲಿ ಘಟನೆ ಸಂಭವಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…