ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಇಂದು ನಡೆಯಿತು.
ತಹಶೀಲ್ದಾರ್ ಎಸ್. ಬಿ ಕೂಡಲಗಿ ಅವರು ದೀಪ ಬೆಳಗಿ ಉದ್ಘಾಟಿಸಿ, ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಮ್ಮ ದೇಶದ ಬಹು ದೊಡ್ಡ ಆಸ್ತಿ. ಹಲವಾರು ದೇಶಗಳ ಸಂವಿಧಾನಗಳನ್ನು ಅಭ್ಯಸಿಸಿ ಅವುಗಳಲ್ಲಿರುವ ಒಳಿತನ್ನು ಕ್ರೋಢೀಕರಿಸಿ ಅತ್ಯುತ್ತಮ ಸಂವಿಧಾನವನ್ನು ಅವರು ನಮಗೆ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭ ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ನವೀನ್ ಬೆಂಜನಪದವು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಿಶು ಅಬಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ತಾತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
Be the first to comment on "ತಾಲೂಕು ಆಡಳಿತ ಸೌಧದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ"