ಬಿಜೆಪಿಯಿಂದ ಮೂರನೇ ಬಾರಿ ಸ್ಪರ್ಧಿಸುತ್ತಿರುವ ಹಾಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶನಿವಾರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಾರ್ಥನೆ ನೆರವೇರಿಸಿ, ಸಹಸ್ರಾರು ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲಿ ಸುಮಾರು 15 ಕಿ.ಮೀ. ಕ್ರಮಿಸಿ, ಬಿ.ಸಿ.ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಸಂದರ್ಭ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಅಬಿದ್ ಗದ್ಯಾಲ್ ಅವರು ನಾಮಪತ್ರ ಸ್ವೀಕರಿಸಿದರು. ತಹಸೀಲ್ದಾರ್ ಕೂಡಲಗಿ ಉಪಸ್ಥಿತರಿದ್ದರು. ಮೆರವಣಿಗೆ ವಿವರಗಳಿಗೆ ಮುಂದೆ ಓದಿರಿ.
ಮೆರವಣಿಗೆ ಸಂದರ್ಭ ಬಿ.ಸಿ.ರೋಡ್ ಪ್ಲೈಓವರ್ ನ ಮೇಲಿನಿಂದ ಪುಷ್ಪಾರ್ಚನೆ ಮಾಡಲಾಯಿತು.ಕಾಲ್ನಡಿಗೆಯ ಉದ್ದಕ್ಕೂ ತಾಯಂದಿರು ಆರತಿ ಕುಂಕುಮ ಹಚ್ಚಿ ಹರಸಿ ಹಾರೈಸಿದರು.ದ.ಕ.ಜಿಲ್ಲೆಯ ರಾಷ್ಟ್ರೀಯ ಪಕ್ಷದ ಪ್ರಥಮ ಅಭ್ಯರ್ಥಿಯಾಗಿ ಬಂಟ್ವಾಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎ. 15 ರಂದು ಶನಿವಾರ ಮಧ್ಯಾಹ್ನ 1.15 ಗಂಟೆ ಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪೊಳಲಿ ದ್ವಾರದಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜೇಶ್ ನಾಯ್ಕ್ ಅವರಿಂದಾಗಿ ಇಂದು ಬಂಟ್ವಾಳ ಜನರು ನೆಮ್ಮದಿಯಿಂದಿದ್ದಾರೆ ಎಂದರು
ಈ ಸಂದರ್ಭದಲ್ಲಿ ಎಂ.ಎಲ್‌ಸಿ.ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಮುಂಬಾಯಿ ಕಾರ್ಪೋರೇಟರ್ ಸಂತೋಷ್ ಶೆಟ್ಟಿ ದಳಂದಿಲ, ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಒಳಚರಂಡಿ ಮತ್ತು ನಗರ ನೀರು ಸರಬರಾಜು ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ದೇವಪ್ಪ ಪೂಜಾರಿ ಪ್ರಮುಖರಾದ ಕಸ್ತೂರಿ ಪಂಜ, ಸುಚರಿತ ಶೆಟ್ಟಿ, ಕೊರಗಪ್ಪ ನಾಯ್ಕ್, ಶರಣ್ ಪಂಪ್ ವೆಲ್ , ರಾಮ್ ದಾಸ್ ಬಂಟ್ವಾಳ ,ಡೊಂಬಯ್ಯ ಅರಳ,ರವೀಶ್ ಶೆಟ್ಟಿ ಕರ್ಕಳ, ಗೋವಿಂದ ಪ್ರಭು, ದಿನೇಶ್ ಭಂಡಾರಿ, ಉದಯರಾವ್, ಸುದರ್ಶನ ಬಜ, ಪ್ರಭಾಕರ ಪ್ರಭು, ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ, ನಳಿನಿ ಶೆಟ್ಟಿ, ಮಾದವ ಮಾವೆ, ಪುಷ್ಪರಾಜ್ ಚೌಟ, ಕಿಶೋರ್ ಪಲ್ಲಿಪಾಡಿ, ಶ್ರೀಧರ್ ಶೆಟ್ಟಿ ಪುಳಿಂಚ, ಕಮಲಾಕ್ಷಿ ಕೆ.ಪೂಜಾರಿ, ರವೀಂದ್ರ ಕಂಬಳಿ, ವಿಲಾಸ್ ನಾಯಕ್, ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ ವಾಮದಮದವು, ಚೆನ್ನಪ್ಪ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ರಮನಾಥ ರಾಯಿ, ದಿನೇಶ್ ಅಮ್ಟೂರು, ಮೋನಪ್ಪ ದೇವಶ್ಯ, ವಜ್ರನಾಥ ಕಲ್ಲಡ್ಕ, ಭುವನೇಶ್ ಪಚ್ಚಿನಡ್ಕ, ಪ್ರದೀಪ್ ಅಜ್ಜಿಬೆಟ್ಡು,ದಿನೇಶ್ ದಂಬೆದಾರ್, ಸತೀಶ್ ಪೂಜಾರಿ ಆಳಕೆ, ಯಶೋಧರ ಕರ್ಬೆಟ್ಟು,ಸಂದೇಶ್ ಶೆಟ್ಟಿ, ಸಂದೀಪ್ ಶೆಟ್ಟಿ, ಸುಪ್ರೀತ್ ಆಳ್ಚ, ಗಣೇಶ್ ರೈ ಮಾಣಿ, ಸುರೇಶ್ ಕೋಟ್ಯಾನ್, ಭಾರತಿ ಚೌಟ, ಸೀಮಾಮಾದವ, ಹರ್ಷಿಣಿ ಪುಷ್ಪಾನಂದ, ಶರ್ಮಿತ್ ಜೈನ್ ವೆಂಕಟೇಶ್ ನಾವುಡ, ಯಶವಂತ ಪೊಳಲಿ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಕಾಲ್ನಡಿಗೆಯ ಮೆರವಣಿಗೆಯಲ್ಲಿ ಪೊಳಲಿಯಿಂದ ಆಗಮಿಸಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್"