ಏ.20ರಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು ಏ.20ರ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ.

ಈ ಸಂದರ್ಭ ಮಾತನಾಡಿದ ರಮಾನಾಥ ರೈ, ಕಾಂಗ್ರೆಸ್ ಯಾವತ್ತೂ ಸುಳ್ಳುಹೇಳುವುದಿಲ್ಲ, ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಬಡವರಿಗೆ ಏಳು ಕೆ.ಜಿ. ಅಕ್ಕಿ ನಿರಂತರವಾಗಿ ನೀಡಿಕೊಂಡುಬಂದಿದ್ದೇವೆ. ರೈತರಿಗೆ ಕೃಷಿಗೆ ಉಚಿತ ವಿದ್ಯುತ್ ಈಗಾಗಲೇ ಕೊಟ್ಟಿದ್ದೇವೆ. ಈ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಈಗಾಗಲೇ ಪ್ರಕಟಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ನಿಶ್ಚಿತ ಎಂದರು.

ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಜನಾರ್ಧನ ಚೆಂಡ್ತಿಮಾರ್, ಸುರೇಶ್ ಕುಮಾರ್ ನಾವೂರ ಮುಂತಾದವರು ವೇದಿಕೆಯಲ್ಲಿದ್ದರು. ಇದೇ ಸಂದರ್ಭ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಮುಖಂಡರು, ಬ್ಲಾಕ್ ಹಾಗೂ ವಲಯ ಮುಖಂಡರುಗಳು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಏ.20ರಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*