ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ಎಪ್ರಿಲ್ 17ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬೆಳಿಗ್ಗೆ 10ಕ್ಕೆ ಕಾರ್ಯಕರ್ತರು,ಹಿತೈಷಿಗಳೊಂದಿಗೆ ಬಿ.ಸಿ ರೋಡಿನ ಕೈಕಂಬದಲ್ಲಿರುವ ಪಕ್ಷದ ಕಛೇರಿಯಿಂದ ಕಾಲ್ನಡಿಗೆಯ ಮೂಲಕ ಚಲಿಸಿ ಇಲ್ಯಾಸ್ ತುಂಬೆ ಅವರು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಮಾಜಕ್ಕಾಗಿ ನಿಸ್ವಾರ್ಥವಾಗಿ ದುಡಿಯುತ್ತಿರುವ ಇಲ್ಯಾಸ್ ತುಂಬೆ ಅವರಂತಹ ನಾಯಕರನ್ನು ವಿಧಾನಸೌಧಕ್ಕೆ ಕಳಿಸಲು ಬಂಟ್ವಾಳದ ಜನತೆ ಈ ಬಾರಿ ಒಮ್ಮತದ ತೀರ್ಮಾನ ಮಾಡಬೇಕಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ: ಎಪ್ರಿಲ್ 17ರಂದು ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ತುಂಬೆ ನಾಮ ಪತ್ರ ಸಲ್ಲಿಕೆ"