ಬಂಟ್ವಾಳ: ರೋಷನ್ ಬೊನಿಫಾಸ್ ಮಾರ್ಟಿಸ್ ಸಾರಥ್ಯದಲ್ಲಿ ವಾರಪತ್ರಿಕೆಯಾದ ‘’ಕರಾವಳಿ ಸುದ್ದಿ’’ಯ ಮೊದಲ ಸಂಚಿಕೆಯನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರು ಏ.17ರಂದು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು.
ಜಾಹೀರಾತು
ಈ ಸಂದರ್ಭ ಶುಭ ಹಾರೈಸಿದ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ, ಪತ್ರಿಕೆ ವಿಶ್ವಾಸಾರ್ಹ ಸುದ್ದಿಗಳನ್ನು ನೀಡುವ ಮೂಲಕ ಕರಾವಳಿಯಾದ್ಯಂತ ತಲುಪಲಿ ಎಂದು ಶುಭ ಹಾರೈಸಿದರು.
ಸಂಪಾದಕ ರೋಷನ್ ಬೊನಿಫಾಸ್ ಮಾರ್ಟಿಸ್ ಮಾತನಾಡಿ, ಸಾಮಾಜಿಕ ಜಾಲತಾಣದ ಈ ಕಾಲದಲ್ಲೂ ನಾವು ಮುದ್ರಣ ಮಾಧ್ಯಮವನ್ನು ಆರಂಭಿಸಿದ್ದು, ಸವಾಲಾಗಿದ್ದರೂ, ಸಮರ್ಥ ಲೇಖಕರಿಂದ ಬರೆಹಗಳು, ವರದಿಗಳ ಮೂಲಕ ಜನರಿಗೆ ಬೇಕಾದ ವಿಚಾರಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತೇವೆ ಎಂದರು. ಪತ್ರಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ, ಕಲಾವಿದ ಚೇತನ್ ರೈ ಮಾಣಿ ಮಾತನಾಡಿ, ಪತ್ರಿಕೆ ಬೆಳೆದುಬಂದ ಹಾದಿಯ ಕುರಿತು ವಿವರಿಸಿದರು. ಉಪಸಂಪಾದಕಿ ಅನಿತಾ ರೋಷನ್ ಮಾರ್ಟಿಸ್ ವಂದಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕರಾವಳಿ ಸುದ್ದಿ ವಾರಪತ್ರಿಕೆ – ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಕಾರ್ಯಕ್ರಮ"
Be the first to comment on "ಕರಾವಳಿ ಸುದ್ದಿ ವಾರಪತ್ರಿಕೆ – ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಕಾರ್ಯಕ್ರಮ"