ಬಂಟ್ವಾಳ

ಹಿರಿಯ ನಾಯಕ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ.ರಮಾನಾಥ ರೈ

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. 

ಜಾಹೀರಾತು

ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು.

ಜಾಹೀರಾತು

ಜಾಹೀರಾತು

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ