ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಂಟ್ವಾಳ ತಾಲೂಕು ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗೀಶ್ ತುಕಾರಾಮ ಬಡಚಿ 594 ಅಂಕಗಳನ್ನು ವಿಜ್ಞಾನದಲ್ಲಿ ಗಳಿಸಿ ರಾಜ್ಯಕ್ಕೆ ತೃತೀಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಶಿಕ್ಷಕ ತುಕಾರಾಮ ಬಡಚಿ ಮತ್ತು ಪುಷ್ಪಾ ಬಡಚಿ ದಂಪತಿಯ ಪುತ್ರನಾಗಿರುವ ಯೋಗೀಶ್ ಕನ್ನಡದಲ್ಲಿ 96, ಇಂಗ್ಲೀಷ್ ನಲ್ಲಿ 98, ಭೌತಶಾಸ್ತ್ರ 100, ಗಣಿತ 100, ರಸಾಯನಶಾಸ್ತ್ರ 100 ಮತ್ತು ಜೀವಶಾಸ್ತ್ರದಲ್ಲಿ 100 ಅಂಕಗಳನ್ನು ಗಳಿಸುವ ಮೂಲಕ ವಿಜ್ಞಾನ ವಿಭಾಗದ ಎಲ್ಲ ಪಠ್ಯಗಳಲ್ಲೂ ಶೇ.100 ಅಂಕ ಗಳಿಸಿದ್ದಾರೆ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ಯೋಗೀಶ್ ವಿಜ್ಞಾನದಲ್ಲಿ ರಾಜ್ಯಕ್ಕೆ ತೃತೀಯ, ಜಿಲ್ಲೆಗೆ ಫಸ್ಟ್"
Be the first to comment on "ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ಯೋಗೀಶ್ ವಿಜ್ಞಾನದಲ್ಲಿ ರಾಜ್ಯಕ್ಕೆ ತೃತೀಯ, ಜಿಲ್ಲೆಗೆ ಫಸ್ಟ್"