ಬಂಟ್ವಾಳ: ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರಾ ಅವರು ಬಂಟ್ವಾಳದ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಜೊತೆ ಮಾತುಕತೆ ನಡೆಸಿದರು.
ಈ ಸಂದರ್ಭ ವಿಧಾನಸಭೆ ಚುನಾವಣೆಯಲ್ಲಿ ರಮಾನಾಥ ರೈ ಅವರು ವಿಜಯಿಯಾಗುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದ ಅವರು, ರೈ ಅವರು ತನ್ನ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರು ಮರೆತಿಲ್ಲ. ಅಪಪ್ರಚಾರಗಳಿಗೆ ಕಿವಿಗೊಡದೆ, ಎಲ್ಲರನ್ನೂ ಸಮಾನವಾಗಿ ನೋಡುವ ರಮಾನಾಥ ರೈಗಳನ್ನೇ ಆರಿಸುತ್ತಾರೆ ಎಂಬ ದೃಢ ವಿಶ್ವಾಸ ವ್ಯಕ್ತಪಡಿಸಿದರು.
ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.
ADVERTISMENT
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…