ಬಂಟ್ವಾಳ

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಬೆಳಿಗ್ಗೆ ನಡೆದಿದೆ.ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಅಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀವೇಗದ ಹಾಗೂ ಅಜಾಕರಕತೆಯಿಂದ ಚಾಲನೆ ಮಾಡಿಕೊಂಡು ಬಂದ ರಿಟ್ಜ್ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅಸುನೀಗಿದ್ದು,ಅಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ADVERTISMENT

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts