ಬಂಟ್ವಾಳ: ಬಂಟ್ವಾಳದ ವಕೀಲರ ಸಂಘದ ಕಚೇರಿಯಲ್ಲಿ ವಿಶ್ವ ಭೂ ದಿನಾಚರಣೆ ನಡೆಯಿತು. ವಕೀಲರ ಸಂಘ (ರಿ ) ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಚಂದ್ರಶೇಖರ ತಳವಾರ ಇವರು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು.
ಜಾಹೀರಾತು
ಸಂಪನ್ಮೂಲ ವ್ಯಕ್ತಿಯಾಗಿ ಶಿವಪ್ರಕಾಶ್ ಜೈನ್ ಮಾತನಾಡಿ, ಪ್ರಕೃತಿಯ ರಕ್ಷಣೆಗೆ ನಾವು ಯಾವ ಮುಂಜಾಗ್ರತೆ ಮಾಡಬೇಕು ಮತ್ತು ಪಕೃತಿಯ ರಕ್ಷಣೆಗೆ ನಮ್ಮ ಕರ್ತವ್ಯವೇನು ಎಂಬ ಬಗ್ಗೆ ಮಾಹಿತಿ ನೀಡಿದರು.ಸರಕಾರಿ ಅಭಿಯೋಜಕರಾದ ಹರಿಣಿ ಅವರು ಉಪಸ್ಥಿತರಿದ್ದರು ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಕೋಸ್ತ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಕೀಲರ ಸಂಘದಲ್ಲಿ ವಿಶ್ವ ಭೂದಿನಾಚರಣೆ"