ಬಂಟ್ವಾಳ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ನಡೆದಿದೆ.
ಜಾಹೀರಾತು
ವೃತ್ತಿ ಯಲ್ಲಿ ಛಾಯಾಗ್ರಾಹಕ ರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ. ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಘಂಟೆಯ ಹೊತ್ತಿಗೆ ಎದೆನೋವೆಂದು ಕುಸಿದುಬಿದ್ದಿದ್ದರು.ತತ್ ಕ್ಷಣ ಅವರನ್ನು ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಮೃತರು ಪತ್ನಿ, ಪುತ್ರ,ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಮುಲ್ಕಾಜೆ ಮಾಡದಲ್ಲಿ ಪ್ರವೀಣ್ ಡಿಜಿಟಲ್ ಸ್ಟುಡಿಯೋ ನಡೆಸುತ್ತಿದ್ದ ಅವರು ಸೌಮ್ಯ ವ್ಯಕ್ತಿ ತ್ವದಿಂದ ಜನಾನುರಾಗಿಯಾಗಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ಸಾವು"