ಬಂಟ್ವಾಳ

ರಮಾನಾಥ ರೈ ಅವರಿಂದ ಜನಮೆಚ್ಚುವ ಕಾರ್ಯ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ

ರಮಾನಾಥ ರೈ ಬಂಟ್ವಾಳದಲ್ಲಿ ಕೆಲಸ ಮಾಡಿದ್ದಾರೆ, ಅವರು ಮಾಡಿದ ಕೆಲಸಗಳು ಕಣ್ಣೆದರು ಕಾಣಿಸುತ್ತದೆ. ಅವರು ಗೆದ್ದೇ ಗೆಲ್ಲುತ್ತಾರೆ. ಎಂದು ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಪೂಜಾರಿ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮುಖಂಡರಾದ ಶಬೀರ್ ಸಿದ್ಧಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಪುರಸಭಾ ಸದಸ್ಯ ಬಿ.ವಾಸು ಪೂಜಾರಿ ಆಗಮಿಸಿ, ಹಿರಿಯ ನಾಯಕ ಜನಾರ್ದನ ಪೂಜಾರಿ ಆಶೀರ್ವಾದ ಪಡೆದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ಪೂಜಾರಿ, ಬಂಟ್ವಾಳ ಕ್ಷೇತ್ರದಲ್ಲಿ ಶಾಸಕರಾಗಿ, ಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಆದರ್ಶಗಳನ್ನು ರಮಾನಾಥ ರೈ ಅವರು ಎತ್ತಿಹಿಡಿದಿದ್ದು, ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬ ಜನಸಾಮಾನ್ಯರನ್ನೂ ಭೇಟಿಯಾಗಿ ಅವರ ನಾಡಿಮಿಡಿತವನ್ನು ಅರಿತು ಕೆಲಸ ಮಾಡಿದ್ದಾರೆ ಎಂದರು.

ಮತದಾರರಿಗೆ ಸಂದೇಶ ನೀಡಿದ ಜನಾರ್ದನ ಪೂಜಾರಿ, ‘’ರಮಾನಾಥ ರೈ ಅವರು ಹಿಂದೆ ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಹಗಲಿರುಳು ಪಕ್ಷಕ್ಕಾಗಿ ನನ್ನ ಜೀವನವನ್ನು ತೊಡಗಿಸಿಕೊಂಡಿದ್ದೆ. ಆದರೆ ಈ ವಯಸ್ಸಿನಲ್ಲಿ ತಮ್ಮನ್ನು ವೈಯಕ್ತಿಕವಾಗಿಯಾಗಲೀ, ಅಥವಾ ಸಾರ್ವಜನಿಕರನ್ನು ಭೇಟಿಯಾಗಿ ಪ್ರಚಾರ ಮಾಡಲು ಅಸಾಧ್ಯವಾದ ಕಾರಣ, ಕಾಂಗ್ರೆಸ್ ಗೆಲ್ಲಬೇಕು ಎಂಬ ಒಂದೇ ಒಂದು ಸದುದ್ದೇಶದಿಂದ ಕೆಲಸ ಮಾಡಿದ ರಮಾನಾಥ ರೈ ಅವರು ಮಾಡಿದ ಕೆಲಸ ಮತ್ತು ಶ್ರಮಕ್ಕೆ ಬೆಲೆ ನೀಡಿ, ಗೆಲ್ಲಿಸುತ್ತೀರಿ’’ ಎಂಬ ಭರವಸೆ ವ್ಯಕ್ತಪಡಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.