ಬಂಟ್ವಾಳ

ಬಂಟ್ವಾಳ: ಚುನಾವಣಾ ಕರ್ತವ್ಯಕ್ಕೆ ತೆರಳಿದ ಸಿಬಂದಿ, ಮತದಾನಕ್ಕೆ ಬೂತ್ ಗಳು ಸಜ್ಜು

ಪುರುಷೋತ್ತಮ ಕೋಲ್ಪೆ, (ಆಮ್ ಆದ್ಮಿ), ಪ್ರಕಾಶ್ ಗೋಮ್ಸ್, (ಜೆಡಿಎಸ್), ರಮಾನಾಥ ರೈ (ಕಾಂಗ್ರೆಸ್), ರಾಜೇಶ್ ನಾಯ್ಕ್ (ಬಿಜೆಪಿ), ಇಲ್ಯಾಸ್ ಮಹಮ್ಮದ್ ತುಂಬೆ (ಎಸ್.ಡಿ.ಪಿ.ಐ.) ಇವರ್ಯಾರೂ ಅಲ್ಲದಿದ್ದರೆ ನೋಟಾ. ಇಷ್ಟು ಲಿಸ್ಟ್ ಇರುವ ಹೆಸರುಗಳುಳ್ಳ ಮತಯಂತ್ರಗಳಲ್ಲಿ ಮೇ.10ರಂದು ಬಂಟ್ವಾಳ ಕ್ಷೇತ್ರದ ಮತದಾರರು ತನ್ನ ಆಯ್ಕೆಯ ಗುಂಡಿಯನ್ನು ಒತ್ತುವ ಪ್ರಕ್ರಿಯೆ ನಡೆಸಲಿದ್ದಾರೆ. ಮತದಾನ ಎಷ್ಟು ಗಂಟೆಗೆ ಆರಂಭ? ಮುಂದೆ ಓದಿರಿ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಟ್ಟೆಗಳಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲ 249 ಮತಗಟ್ಟೆಗಳಿಗೆ ಚುನಾವಣಾ ಸಿಬಂದಿ ತೆರಳಿದ್ದು, ಮೇ.10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಗಳಾಗಿವೆ. ಚುನಾವಣಾ ಬೂತ್ ಗಳಿಗೆ ಸಿಬಂದಿ ತಲುಪಿದ್ದು, ಬೆಳಗ್ಗೆ ನಿಗದಿತ ಸಮಯದಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ಪ್ರಕ್ರಿಯೆಗಳು ನಡೆಯಲಿದ್ದು, ಇವಿಎಂ ನಲ್ಲಿ ಮತದಾನ ಮಾಡಲಾಗುತ್ತದೆ.

ಬಂಟ್ವಾಳ ತಾಲೂಕಿನಲ್ಲಿ ಒಟ್ಟು ಮತದಾರರ ಸಂಖ್ಯೆ ವಿವರ ಇಲ್ಲಿದೆ: ಪುರುಷರು 112229, ಸ್ತ್ರೀಯರು 116148, ಒಟ್ಟು ಮತದಾರರು 228377. ಇಷ್ಟು ಮತದಾರರು ಮೇ.10ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮತ ಚಲಾಯಿಸುವ ಹಕ್ಕನ್ನು ಪಡೆದಿರುತ್ತಾರೆ. ತಮ್ಮ ಮನೆಯ ಸಮೀಪವೇ ಮತಗಟ್ಟೆಗಳು ಇರುವ ಕಾರಣ ಹಾಗೂ ಮತದಾನಕ್ಕೆ ಸಾಕಷ್ಟು ಅವಕಾಶಗಳೂ ಇರುವ ಕಾರಣ ಯಾರೂ ಗುಂಪುಗೂಡದೆ, ಗೊಂದಲ ಮಾಡದೆ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ವಿನಂತಿ ಮಾಡಿಕೊಂಡಿದ್ದಾರೆ.

ಮಂಗಳವಾರ ಮೊಡಂಕಾಪಿನ ಇನ್ಫೆಂಟ್  ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು. ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು, ಪ್ರತೀ ಮತಗಟ್ಟೆಗೆ 4 ಮತಗಟ್ಟೆ ಅಧಿಕಾರಿಗಳು, 1 ಗ್ರೂಪ್ ಡಿ, 1 ಪೊಲೀಸ್ ಹಾಗೂ 1200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳಿಗೆ 1 ಹೆಚ್ಚವರಿ ಅಧಿಕಾರಿಗಳನ್ನು ನೇಮಕಾತಿ ಮಾಡಲಾಗಿದೆ.  25 ಸೆಕ್ಟರ್ ಅಧಿಕಾರಿಗಳು ಮಸ್ಟರಿಂಗ್ ಕಾರ್ಯವನ್ನು ನಡೆಸಿಕೊಟ್ಟರು. ಗ್ರೂಪ್ ಡಿ ಮತ್ತು ಪೊಲೀಸ್ ಸಿಬ್ಬಂದಿಗಳನ್ನೂ ಒಳಗೊಂಡಂತೆ ಸುಮಾರು 1572 ಮಂದಿ ಚುನಾವಣಾ ಕರ್ತವ್ಯಕ್ಕಾಗಿ 25 ಬಸ್ ಗಳು, 26 ಮ್ಯಾಕ್ಸಿ ಕ್ಯಾಬ್, 22 ಮಿನಿ ಬಸ್, 20 ಜೀಪುಗಳಲ್ಲಿ ಮತಗಟ್ಟೆಗಳಿಗೆ ತೆರಳಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾ ವೀಕ್ಷಕರಾದ ದೀಪಾಂಕರ್ ಸಿನ್ಹಾ, ಚುನಾವಣಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಚುನಾವಣಾಧಿಕಾರಿ ಎಸ್ ಬಿ ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ ಎಸ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ, ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರರಾದ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯಕ್ ಎನ್ ಎಮ್, ವಿಜಯ್ ವಿಕ್ರಮ್, ದಿವಾಕರ ಮುಗುಲ್ಯ ಮಸ್ಟರಿಂಗ್ ಮೇಲುಸ್ತುವಾರಿ ವಹಿಸಿದ್ದರು. ವಿವಿಧ ಇಲಾಖೆಗಳ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಉಪಸ್ಥಿತರಿದ್ದರು.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿ 156 ಮತಗಟ್ಟೆಗಳನ್ನು ವೆಬ್ ಕಾಸ್ಟಿಂಗ್ ಗಾಗಿ ಆಯ್ಕೆ ಮಾಡಲಾಗಿರುತ್ತದೆ. 62 ಮತಗಟ್ಟೆಗಳಿಗೆ ಅರೆ ಸೇನಾ ಪಡೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 5 ಮತಗಟ್ಟೆಗಳನ್ನು ‘ಸಖಿ’ ಮತಗಟ್ಟೆಗಳಾಗಿ ಗುರುತಿಸಲಾಗಿದೆ. ಹಾಗೆಯೇ 1 ಯಕ್ಷಗಾನ, 2 ಕಂಬಳ, 1 ನೀಲತರಂಗ, 1 ಪರಂಪರೆ, 1 ಗೋಗ್ರೀನ್, 1 ವಿಕಲಚೇತನ ಮತಗಟ್ಟೆಗಳಾಗಿ SVEEP ಯೋಜನೆಯಡಿ ಗುರುತಿಸಲಾಗಿದ್ದು, ಮತಗಟ್ಟೆಗಳನ್ನು ಆಯಾ ವಿಷಯಕ್ಕೆ ಅನುಗುಣವಾಗಿ ಈಗಾಗಲೇ ವಿನ್ಯಾಸಗೊಳಿಸಲಾಗಿದೆ. ಪೂರ್ವಾಹ್ನ 7.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೂ ಮತದಾನಕ್ಕೆ ಅವಕಾಶ ಇರುತ್ತದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago