ಬಂಟ್ವಾಳ: ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಕಾರಿಂಜ ಕ್ರಾಸ್, ಸೇರಾ ಕ್ಲಿನಿಕ್ ಹತ್ತಿರ ನಡೆದ ಘಟನೆಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸೇಸಮ್ಮ (60) ಮೃತಪಟ್ಟವರು.
ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಕಡೆಯಿಂದ ಬಂದ ಕಾರು ತಿರುವು ರಸ್ತೆಯಲ್ಲಿ ನಿದಾನವಾಗಿ ಚಲಾಯಿಸದೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸ್ಕೂಟರ್ ಅನ್ನು ಓವರ್ ಟೇಕ್ ಮಾಡಿಕೊಂಡು ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿ ಸೇಸಮ್ಮ ಎಂಬವರ ಹಿಂಬದಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಮಹಿಳೆ ತಲೆಗೆ, ಸೊಂಟಕ್ಕೆ, ಕೈ ಕಾಲುಗಳಿಗೆ ಗುದ್ದಿದ ಗಾಯಗಳಾಗಿದ್ದು ಚಿಕಿತ್ಸೆಯ ಬಗ್ಗೆ ಬಂಟ್ವಾಳ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಸಾಗಿಸುವಾಗಲೇ ಮೃತಟ್ಟಿರುವುದಾಗಿ ತಿಳಿಸಿದ್ದಾರೆ. ಕಾರು ಚಾಲಕಿ ವಿರುದ್ಧ ಪ್ರಕರಣ ದಾಖಲುಗೊಂಡಿದೆ.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)