ಬಂಟ್ವಾಳದಲ್ಲಿ ಬುಧವಾರ ಸಂಜೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಮುಂದಿನ ದಿನಗಳಲ್ಲಿ ಸರಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ನಿಯಮಾನುಸಾರ ಜಾರಿ ಮಾಡುತ್ತೇವೆ ಎಂದರು. ಬಿಜೆಪಿ ಸರಕಾರ ಮತ್ತು ಕಾಂಗ್ರೆಸ್ ಗಿರುವ ವ್ಯತ್ಯಾಸವನ್ನು ನಾವು ತೋರಿಸಿಕೊಡುತ್ತೇವೆ ಎಂದರು.
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರನ್ನು ನಾಮಪತ್ರ ಸಲ್ಲಿಕೆ ಸಂದರ್ಭವೂ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೆ. ಅವರು ನನ್ನ ಅತ್ಯಂತ ಪ್ರೀತಿಯ ನಾಯಕರು. ನಾನು ಎನ್.ಎಸ್.ಯು.ಐ. ಅಧ್ಯಕ್ಷನಾಗಲು ಅವರ ಮಾರ್ಗದರ್ಶನವೇ ಕಾರಣ. ಅವರ ಪ್ರಾಮಾಣಿಕತೆ, ಪರಿಶ್ರಮ, ಸಾಮಾಜಿಕ ಬದ್ಧತೆ ನನ್ನ ರಾಜಕೀಯ ಜೀವನದಲ್ಲೂ ಪರಿಣಾಮ ಬೀರಿದೆ. ಗೆಲುವು ಸಾಧಿಸಿದ ಬಳಿಕ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಎಲ್ಲ ಕಾಂಗ್ರೆಸಿಗರನ್ನೂ ಕುಟುಂಬದ ರೀತಿಯಲ್ಲಿ ಕೊಂಡೊಯ್ಯಬೇಕು ಎಂಬ ಅವರ ಸಲಹೆ ಸ್ವೀಕರಿಸಿದ್ದೇನೆ ಎಂದರು.
ಈ ಸಂದರ್ಭ ಜಿಪಂ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ತಾಪಂ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪ್ರಮುಖರಾದ ಸಂತೋಷ್ ಶೆಟ್ಟಿ, ಈಶ್ವರ ಉಳ್ಳಾಲ್, ಹಾಸಿರ್ ಪೇರಿಮಾರ್, ಹುಸೈನ್ ಕುಂಞಮೋನ್, ಮಲ್ಲಿಕಾ ಪಕ್ಕಳ, ಅರುಣ್ ಡಿಸೋಜಾ,ದೇವದಾಸ್ ಭಂಡಾರಿ, ದೀಪಕ್ ಪಿಲಾರ್, ಸುರೇಶ್ ಭಟ್ನಾಗರ್, ಮುಸ್ಪಾಫ ಹರೇಕಳ, ಮರಳೀಧರ ಶೆಟ್ಟಿ, ಫಾರೂಕ್ ದೇರಳ ಕಟ್ಟೆ, ನವಾಝ್ ನರಿಂಗಾಣ್, ಶಮೀರ್ ಫಜೀರ್, ದಿನೇಶ್ ಪೂಜಾರಿ, ರಝಾಕ್ ಕುಕ್ಕಾಜೆ, ಮಹನ್ಮದ್ ಮುಕ್ಕಚ್ಚೇರಿ ಮತ್ತಿತರರು ಉಪಸ್ಥಿತರಿದ್ದರು.
Be the first to comment on "U.T.KADAR at BANTWAL: ಸರಕಾರ ರಚನೆಯಾದ ತಕ್ಷಣ ನಿಯಮಾನುಸಾರ ಗ್ಯಾರಂಟಿ ಅನುಷ್ಠಾನ: ಯು.ಟಿ.ಖಾದರ್ ಹೇಳಿದ್ದೇನು?"