ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ದೇವಸ್ಥಾನದಲ್ಲಿ ಶ್ರೀ ಶಂಕರ ಜಯಂತಿ ಉತ್ಸವ ಸಮಾರೋಪ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ಶಂಕರ ಸೇವಾ ಪ್ರತಿಷ್ಠಾನದ ಬಂಟ್ವಾಳ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 21ರ ಭಾನುವಾರ ಬೆಳಗ್ಗೆ 7 ಗಂಟೆಗೆ ರುದ್ರಯಾಗದಿಂದ ಕಾರ್ಯಕ್ರಮ ಆರಂಭಗೊಳ್ಳುತ್ತದೆ. ಬಳಿಕ ಗಮಕ ವಾಚನ, ಬೆಳಗ್ಗೆ 11 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭ ಶ್ರೀ ಶಂಕರರ ಕುರಿತು ಉಪನ್ಯಾಸ ಕಾರ್ಯಕ್ರಮ ನೆರವೇರಲಿದೆ. ಸಮಾರೋಪ ಭಾಷಣವನ್ನು ನಿವತ್ತ ಪ್ರಿನ್ಸಿಪಾಲ್ ಡಾ.ಪಾದೇಕಲ್ಲು ವಿಷ್ಣು ಭಟ್ ನೆರವೇರಿಸುವರು. ಬಳಿಕ ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದರು.
ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನದ ಅಂಗವಾಗಿ ಈಗಾಗಲೇ ಶ್ರೀ ಶಂಕರ ಜಯಂತಿ ಉತ್ಸವಗಳು ಆರಂಭಗೊಂಡಿದ್ದು, ಅದರ ಸಮಾರೋಪ ಇದಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಘಟಕದ ಪ್ರಧಾನ ಸಂಚಾಲಕ ಅನಾರು ಕೃಷ್ಣ ಶರ್ಮಾ, ಕೋಶಾಧಿಕಾರಿ ರವೀಂದ್ರ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ ಕಂದೂರು ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಪಾಣೆಮಂಗಳೂರಿನ ಭಯಂಕೇಶ್ವರ ದೇವಸ್ಥಾನದಲ್ಲಿ ಶಂಕರ ಜಯಂತಿ ಉತ್ಸವ ಸಮಾರೋಪ"