ಬಂಟ್ವಾಳ: ಬಂಟ್ವಾಳ ತಾಲೂಕಿನ ನೆಟ್ಲ ಸಮೀಪದ ನಿವಾಸಿ ಪ್ರವೀಣ್ (38) ಎಂಬಾತ ಗುರುವಾರ ಬಿ.ಸಿ.ರೋಡಿನ ನೇತ್ರಾವತಿ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ಮುಳುಗು ತಜ್ಞ ಮಹಮ್ಮದ್ ಗೂಡಿನಬಳಿ ಶವ ಹುಡುಕಾಟ ನಡೆಸಿ ಮೇಲಕ್ಕೆತ್ತಲು ಸಹಕರಿಸಿದರು.ಸಂಜೆಯ ವೇಳೆ ಶವ ಪತ್ತೆಯಾಗಿದೆ. ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ಸಮಸ್ಯೆ ಅನುಭವಿಸುತ್ತಿದ್ದ ಎನ್ನಲಾಗಿದ್ದು, ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಕಿನಲ್ಲಿ ಬಂದ ಈತ ನೇತ್ರಾವತಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಚಪ್ಪಲಿ ಅಲ್ಲೆ ಇಟ್ಟು ಹಾರಿದ್ದಾನೆ
Be the first to comment on "ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ"