ಜಾಹೀರಾತು
ಪುತ್ತೂರಿನಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪೋಲೀಸ್ ದೌರ್ಜನ್ಯ ನಡೆಸಿದ ವಿಚಾರದ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪತ್ರಿಕಾ ಹೇಳಿಕೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕಾನೂನು ಮೀರಿ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿರುವ ಅವರು, ಈಗಾಗಲೇ ಯುವಕರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೇಲಧಿಕಾರಿಗಳು ಓರ್ವ ಎಸ್.ಐ. ಹಾಗೂ ಪೋಲೀಸ್ ಅನ್ನು ಅಮಾನತು ಮಾಡಿದ್ದಾರೆ, ಆದರೆ ಕೇವಲ ಅಮಾನತು ಸಾಲದು, ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.
ಪೋಲೀಸ್ ದೌರ್ಜನ್ಯ ಘಟನೆಗಳು ನಡೆಯಬಾರದು ಎಂದು ತಿಳಿಸಿರುವ ಅವರು ಹಿಂದು ಕಾರ್ಯಕರ್ತರ ಜೊತೆಗೆ ಯಾವತ್ತು ನಾವಿದ್ದೇವೆ , ಯಾವುದೇ ಭಯಬೇಡ ಎಂದು ಶಾಸಕ ರಾಜೇಶ್ ನಾಯ್ಕ್ ಭರವಸೆ ನೀಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ದೂರು: ಕ್ರಮ ಕೈಗೊಳ್ಳಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒತ್ತಾಯ"