ಫರಂಗಿಪೇಟೆ

ಸಾಮಾಜಿಕ, ಧಾರ್ಮಿಕ ಮುಖಂಡ, ಆರೆಸ್ಸೆಸ್ ಪುತ್ತೂರು ಸಂಘಚಾಲಕ ಕೊಡ್ಮಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮತ್ತು ಆರ್.ಎಸ್.ಎಸ್. ಮುಖಂಡ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ. ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲ ಭಾರತೀಯ ಜನತಾಪಕ್ಷದಲ್ಲು ಗುರುತಿಸಿಕೊಂಡಿದ್ದ ಅವರು ಒಂದು ಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ. ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೇರಮಜಲು ಗ್ರಾ.ಪಂ.ಅಧ್ಯಕ್ಷರಾಗಿ, ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿಯೂ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದರು.
ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ,ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿಯು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಈ ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಮ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ ಸಾಮಾಜಿಕ ಚಟುವಟಿಕೆಗೆ ಮಾರ್ಗದರ್ಶಕರು, ಪ್ರೇರಣಾಶಕ್ತಿಯಾಗಿದ್ದರು. ವಾಗ್ಮೀಯು ಆದ ಕಾಂತಪ್ಪ ಶೆಟ್ಟಿ ಅವರು ಹವ್ಯಾಸಿ ನಾಟಕ ಕಲಾವಿದರಾಗಿದ್ದ ಕಾಂತಪ್ಪ ಶೆಟ್ಟಿ ಕೆಲ ನಾಟಕಗಳಲ್ಲಿಯ ಬಣ್ಣಹಚ್ಚಿದ್ದರು. ಸಂಘದಲ್ಲಿ ಕಾಂತಪ್ಪಣ್ಣ ಎಂದೇ ಚಿರಪರಿಚಿತರಾಗಿದ್ದರು.ಅವರು ಪತ್ನಿ ಹಾಗೂ ತಮ್ಮನ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಸಂಸದ ನಳಿನ್ ಕುಮಾರ್ ಕಟೀಲ್,ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ