ಜೂನ್ 11ರಂದು ಮಂಗಳೂರಿನ ನಂತೂರಿನಲ್ಲಿ ಹಲಸುಮೇಳ: ಏನಿದರ ವಿಶೇಷ?

ಕೃಪೆ: ಅಂತರ್ಜಾಲ

ಮಂಗಳೂರು (MANGALORE) ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.11ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳವರ ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ. ಮಾತೆಯರು, ಮಹನೀಯರು ತಯಾರಿಸಿದ ಅತ್ಯುತ್ತಮ ಆಹಾರವನ್ನು ಆರೋಗ್ಯಪೂರ್ಣ ಜೀವನಕ್ಕಾಗಿ ಪಡೆದುಕೊಳ್ಳಬಹುದಾಗಿದೆ.

ಮೇಳದಲ್ಲಿ ಹಲಸು, ಮಾವು, ಬಾಳೆಯವಿವಿಧ ರೀತಿಯ ತಿಂಡಿಗಳು ಸಿಗಲಿವೆ. ಹಲಸಿನ ಹಣ್ಣಿನ ಪಾಯಸ, ಬೆರಟಿ ಪಾಯಸ, ಹಲಸಿನ ಬೀಜ ಪಾಯಸ, ಹಲಸಿನ ಕಾಯಿ ದೋಸೆ/ಶುಂಠಿ ಚಟ್ನಿ, ಹಲಸಿನ ಹಣ್ಣಿನ ದೋಸೆ, ಸೊಳೆ ರೊಟ್ಟಿ, ಗುಜ್ಜೆ ಮಂಚೂರಿ, ಹಲಸಿನ ಬೀಜದ ಚಟ್ಟಂಬಡೆ, ಹಲಸಿನ ಕಾಯಿ ಸೋಂಟೆ, ಹಲಸಿನ ಕಾಯಿ ಬೋಂಡ, ಬಾಳೆಕಾಯಿ ಚಿಪ್ಸ್, ಹಲಸಿನ ಕಾಯಿ ಹಪ್ಪಳ, ಹಲಸಿನ ಹಣ್ಣಿನ ಹಪ್ಪಳ, ಬಾಳೆಹಣ್ಣಿನ  ಹಲ್ವ, ಹಲಸಿನ ಹಣ್ಣಿನ ಹಲ್ವ, ಹಲಸಿನ ಬೀಜದ ಅದ್ದಿಹಿಟ್ಟು, ಮಾವಿನ ಹಣ್ಣಿನ ಮಾಂಬಳ, ಹಲಸಿನ ಹಣ್ಣಿನ ಸೊಳೆ, ಹಲಸಿನ ಕಾಯಿ ಸೊಳೆ, ಗುಜ್ಜೆ ಪಲಾವ್, ಹಲಸಿನ ಹಣ್ಣು ಕೊಟ್ಟಿಗೆ, ಹಲಸಿನ ಹಣ್ಣು ಗೆಣಸಲೆ, ಹಲಸಿನ ಹಣ್ಣು ಇಡ್ಲಿ, ಬಾಳೆಕಾಯಿ ದೋಸೆ, ಹಲಸಿನ ಕಾಯಿ ಪೋಡಿ, ಹಲಸಿನಕಾಯಿ ಅಂಬೊಡೆ, ಹಲಸಿನ ಹಣ್ಣಿನ ಬನ್ಸ್, ಹಲಸಿನ ಬೀಜ ಹೋಳಿಗೆ, ಹಲಸಿನ ಹಣ್ಣಿನ ಗುಳಿಅಪ್ಪ, ಚಕ್ಕುಲಿ, ಬಾಳೆದಂಡಿನ ಸೂಪ್ ಹಲಸಿನ ಬೀಜದ ಸೂಪ್, ಹಲಸಿನಕಾಯಿ ಕಟ್ಲೆಟ್, ಅತಿರಸ, ಸಕ್ಕರೆ ಬೆರಟಿ, ಮಾವಿನ ಹಣ್ಣಿನ ರಸಾಯನ, ಕಾಫಿ, ಟೀ, ಕಷಾಯ, ಬಿಸ್ಕೆಟ್ ರೊಟ್ಟಿ, ಮಾವಿನಹಣ್ಣಿನ ಜ್ಯೂಸ್, ಮಸಾಲೆ ಮಜ್ಜಿಗೆ ನೀರು ಪಡೆಯಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹಲಸಿನ ನೋಟ..

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೂನ್ 11ರಂದು ಮಂಗಳೂರಿನ ನಂತೂರಿನಲ್ಲಿ ಹಲಸುಮೇಳ: ಏನಿದರ ವಿಶೇಷ?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*